ಬ್ರೇಕ್ ಫಾಸ್ಟ್ ಮೀಟಿಂಗ್: ಸಿಎಂ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮೇ,28,2026 (www.justkannada.in):  ರಾಜ್ಯದಲ್ಲಿ ಕಳೆದ ಎರಡು ದಿನಗಳಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದ್ದು ಇದೀಗ ಇಂದು ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸುತ್ತಿದ್ದಾರೆ.

ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ  ಉಪಹಾರ ಸಭೆ ನಡೆಸುತ್ತಿದ್ದಾರೆ. ಉಪಹಾರ ಕೂಟದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಸಂತೋಷ್ ಲಾಡ್, ಸಚಿವ ರಾಮಲಿಂಗ ರೆಡ್ಡಿ ಹಲವರು ಭಾಗಿಯಾಗಿದ್ದಾರೆ.

ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯರ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ. ಹಾಗೆಯೇ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಅವರನ್ನ ಆಲಂಗಿಸಿ ಆಶೀರ್ವಾದಿಸಿದ್ದಾರೆ.

ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದ್ದು ಈ ವೇಳೆ ತಮ್ಮ ನಿರ್ಧಾರವನ್ನ ಪ್ರಕಟಿಸಲಿದ್ದಾರೆ.

Key words: Breakfast meeting,  DCM, D.K  Shivakumar, CM Siddaramaiah