ತುಮಕೂರು,ಜೂನ್,1,2026 (www.justkannada.in): ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಬದಲಾವಣೆ ವಿಚಾರ ಚರ್ಚೆ ಹಿನ್ನೆಲೆಯಲ್ಲಿ ಈ ಕುರಿತು ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ವಿ.ಸೋಮಣ್ಣ, ನನ್ನ ಬಳಿ ಯಾವುದೇ ಮಾಹಿತಿ ಇಲ್ಲ. ವ್ಯಕ್ತಿಗಿಂತ ಪಕ್ಷ ದೊಡ್ಡದು. ಪಕ್ಷಕ್ಕಿಂತ ದೇಶ ದೊಡ್ಡದು. ನಾನು ಕೇಂದ್ರ ಸರ್ಕಾರದ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದೇನೆ. ಪಕ್ಷದೊಳಗಿನ ಇತ್ತೀಚಿನ ಬೆಳವಣಿಗೆ ಬಗ್ಗೆ ಗೊತ್ತಿಲ್ಲ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ವಿ.ಸೋಮಣ್ಣ, ಹೈಕಮಾಂಡ್ ಸೂಚನೆಗೆ ನಾವೆಲ್ಲರೂ ಬದ್ದರಾಗಿದ್ದೇವೆ ಎಂದರು.
Key words: Change, BJP ,State President, High Command, Union Minister, V. Somanna







