ಬೆಂಗಳೂರು, ಜೂನ್, 3,2026 (www.justkannada.in): ಕಾಂಗ್ರೆಸ್ ನ ಪ್ರಬಲ ನಾಯಕ, ಟ್ರಬಲ್ ಶೂಟರ್ ಎಂದೇ ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿರುವ ಡಿಕೆ ಶಿವಕುಮಾರ್ ಅವರ ಬಹುದಿನಗಳ ಕನಸು ಇಂದು ನನಸಾಗುವ ಕಾಲ ಸನ್ನಿಹಿತವಾಗಿದೆ.
ಹೌದು ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ ಮಾಡಲಿದ್ದಾರೆ. ಲೋಕಭವನದ ಗಾಜಿನಮನೆಯಲ್ಲಿ ಪದಗ್ರಹಣ ಸಮಾರಂಭ ನಡೆಯಲಿದ್ದು ಡಿಕೆ ಶಿವಕುಮಾರ್ ಜೊತೆಗೆ 10 ರಿಂದ 12 ಮಂದಿ ಶಾಸಕರೂ ಸಹ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.
ಈ ಸಮಾರಂಭಕ್ಕೆ 10,000ಕ್ಕೂ ಹೆಚ್ಚು ವಿವಿಐಪಿ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಕಾಂಗ್ರೆಸ್ ನಾಯಕ ಗಾಂಧಿ, ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 4:05ಕ್ಕೆ ಸರಿಯಾಗಿ ಪದಗ್ರಹಣ ನೆರವೇರಲಿದೆ.
ಇಂದು ಸಿಎಂ ಆಗಿ ಡಿಕೆಶಿ ಕುರ್ಚಿ ಏರಲು ಸಿದ್ಧರಾಗಿದ್ದಾರೆ. ಡಿ ಕೆ ಶಿವಕುಮಾರ್ ಜೊತೆಗೆ 10-12 ಮಂದಿ ಶಾಸಕರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Key words: DK Shivakumar, sworn, new CM, today






