ಬೆಂಗಳೂರು,ಜೂನ್,5,2026 (www.justkannada.in): ಖಾತೆ ಹಂಚಿಕೆ ಬಗ್ಗೆ ಸಚಿವರಿಬ್ಬರು ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಯು.ಟಿ ಖಾದರ್, ಸಚಿವರ ರಾಜೀನಾಮೆ ವಿಚಾರ ಇದು ನಮ್ಮ ವ್ಯಾಪ್ತಿಗೆ ಬರಲ್ಲ. ಮುಖ್ಯಮಂತ್ರಿ ಇದ್ದಾರೆ ಈ ವಿಚಾರವನ್ನ ಬಗೆಹರಿಸುತ್ತಾರೆ ಎಂದು ತಿಳಿಸಿದ್ದಾರೆ.
ಹಾಗೆಯೇ ನನಗೆ ಕೊಟ್ಟಿರುವ ಖಾತೆ ಬಗ್ಗೆ ನನಗೆ ಸಮಾಧಾನ ಇದೆ. ನಾನು ಖುಷಿಯಿಂದ ಇದ್ದೇನೆ ಖುಷಿಯಿಂದ ಕೆಲಸ ಮಾಡುತ್ತೇನೆ . ಎಂದು ಆರೋಗ್ಯ ಸಚಿವ ಯುಟಿ ಖಾದರ್ ಸಂತಸ ವ್ಯಕ್ತಪಡಿಸಿದ್ದಾರೆ.
Key words: satisfied, portfolio, Minister, U.T. Khader






