Wednesday, September 9, 2026

BDA Apartments

Home Front Page ‘ಕೈ’ಶಾಸಕ ಷಡಕ್ಷರಿ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಗಂಭೀರ

‘ಕೈ’ಶಾಸಕ ಷಡಕ್ಷರಿ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ,ಜೂನ್,11,2026 (www.justkannada.in): ಸಚಿವ ಸ್ಥಾನಕ್ಕಾಗಿ ಪಕ್ಷದ ಹೈಕಮಾಂಡ್ ಬಳಿ ಬೇಡಿಕೆ ಇಡಲು ದೆಹಲಿಗೆ ತೆರಳಿದ್ದ ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರು ದಿಢೀರ್ ಆನಾರೋಗ್ಯಕ್ಕೊಳಗಾಗಿದ್ದು ತಕ್ಷಣವೇ ಅವರನ್ನ  ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ನಾಟಕ ಭವನದಲ್ಲಿದ್ದ ವೇಳೆ ಶಾಸಕ ಷಡಕ್ಷರಿ ದಿಢೀರ್‌ ಅಸ್ವಸ್ಥರಾಗಿದ್ದು, ತಕ್ಷಣ ಅವರನ್ನು ದೆಹಲಿಯ ನ್ಯಾಶ್ ಆಸ್ಪತ್ರೆಗೆ  ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಶಾಸಕ ಷಡಕ್ಷರಿ ಅವರು ಚಿಕಿತ್ಸೆ ಪಡೆಯುತ್ತಿದ್ದು  ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.  ಈ ಮಧ್ಯೆ ಡಿಸಿಎಂ ಪರಮೇಶ್ವರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಶಾಸಕ ಷಡಕ್ಷರಿ ಅವರು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದರು. ಈ ವೇಳೆ  ಅನಾರೋಗ್ಯಕ್ಕೊಳಗಾಗಿದ್ದಾರೆ.

Key words: Congress MLA, Shadakshari, admitted , hospital