ಕರ್ನಾಟಕದಿಂದ ನಾಲ್ವರು ರಾಜ್ಯಸಭಾ ಸದಸ್ಯರಾಗಿ ಅವಿರೋಧ ಆಯ್ಕೆ

ಬೆಂಗಳೂರು,ಜೂನ್,11,2026 (www.justkannada.in): ಕರ್ನಾಟಕ ವಿಧಾನಸಭೆಯಿಂದ ನಾಲ್ವರು ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್  ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿ ರಾಜ್ಯಸಭೆ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ಕೆ.ಎಂ.ವಿಶಾಲಾಕ್ಷಿ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನು ಕರ್ನಾಟಕದಿಂದ ರಾಜ್ಯಸಭೆ ಆಯ್ಕೆಯಾದ ಬಗ್ಗೆ ಮಾತನಾಡಿದ ಕಾಂಗ್ರೆಸ್​​​ ನ ಪವನ್ ಖೇರಾ, ಕರ್ನಾಟಕದಿಂದ ರಾಜ್ಯಸಭೆ ಸದಸ್ಯನಾಗಿ ಆಯ್ಕೆಯಾಗಿದ್ದಕ್ಕೆ ಖುಷಿ ಇದೆ. ಮುಂದೆ ನಾನು ಇಲ್ಲಿಗೆ ಬರುವಾಗ ಕನ್ನಡ ಕಲಿತುಕೊಂಡು ಬರುತ್ತೇನೆ  ಎಂದು ಸಂತಸ ವ್ಯಕ್ತಪಡಿಸಿದರು.

Key words: Four, Rajya Sabha, members, elected, from, Karnataka