ನವದೆಹಲಿ,ಜೂನ್,11,2026 (www.justkannada.in): ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಡಿಕೆ ಶಿವಕುಮಾರ್, ಕರ್ನಾಟಕದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಶ್ರೀ ಮಲ್ಲಿಕಾರ್ಜುನ ಖರ್ಗೆ, ಶ್ರೀ ಪವನ್ ಖೇರಾ ಹಾಗೂ ಶ್ರೀ ಮನ್ಸೂರ್ ಅಲಿ ಖಾನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ನಮ್ಮ ರಾಜ್ಯದ ಹಿತರಕ್ಷಣೆ, ಪ್ರಗತಿ ಮತ್ತು ಅಭಿವೃದ್ಧಿಗಾಗಿ ಇವರೆಲ್ಲರೂ ಕೇಂದ್ರದಲ್ಲಿ ಕರ್ನಾಟಕದ ಬಲವಾದ ಧ್ವನಿಯಾಗಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
Key words: CM DK Shivakumar, congratulates, Congress candidates, elected, Rajya Sabha






