ನವದೆಹಲಿ, ಜೂನ್,12,2026 (www.justkannada.in): ಭಾರತದ ಶ್ರೇಷ್ಠ ಶೂಟರ್ ಮತ್ತು ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ತರಬೇತುದಾರ, ಮನು ಭಾಕರ್ ಗೆ ಮಾರ್ಗದರ್ಶನ ನೀಡಿದ್ದ ಕೋಚ್ ಜಸ್ಪಾಲ್ ರಾಣಾ(49) ಅವರು ನಿಧನರಾಗಿದ್ದಾರೆ.
ಅನಾರೋಗ್ಯದಿಂದ ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಭಾರತೀಯ ಶೂಟಿಂಗ್ ಕ್ಷೇತ್ರದ ದಿಗ್ಗಜರಾಗಿದ್ದ ಜಸ್ಪಾಲ್ ರಾಣಾ, ಒಲಿಂಪಿಯನ್ ಮನು ಭಾಕರ್ ಅವರ ಯಶಸ್ಸಿನ ಹಿಂದಿನ ಪ್ರಮುಖ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು.
1990ರ ದಶಕದಲ್ಲಿ ಭಾರತದಲ್ಲಿ ಶೂಟಿಂಗ್ ಕ್ರೀಡೆಯು ಇನ್ನು ಜನಪ್ರಿಯವಾಗದ ಕಾಲದಲ್ಲೇ ಜಸ್ಪಾಲ್ ರಾಣಾ ಅವರು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಅಸಾಧಾರಣ ಪ್ರದರ್ಶನ ನೀಡುವ ಮೂಲಕ ದೇಶದ ಗಮನ ಸೆಳೆದರು. ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಚಾಂಪಿಯನ್‌ಶಿಪ್‌ಗಳಲ್ಲಿ ಸಾಲು ಸಾಲು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಭಾರತದಲ್ಲಿ ಶೂಟಿಂಗ್ ಕ್ರೀಡೆಗೆ ಒಂದು ಹೊಸ ಮೆರುಗನ್ನು ತಂದುಕೊಟ್ಟಿದ್ದರು.
Key words: Renowned, shooting coach, Jaspal Rana, no more






