Friday, July 31, 2026

BDA Apartments

Home Front Page ಇಂದು ದಿ.ಇಂದಿರಾ ಗಾಂಧಿ 35ನೇ ಪುಣ್ಯತಿಥಿ: ಸೋನಿಯಾ ಗಾಂಧಿ, ಮನಮೋಹನ್ ಸಿಂಗ್ ಗೌರವ ನಮನ

ಇಂದು ದಿ.ಇಂದಿರಾ ಗಾಂಧಿ 35ನೇ ಪುಣ್ಯತಿಥಿ: ಸೋನಿಯಾ ಗಾಂಧಿ, ಮನಮೋಹನ್ ಸಿಂಗ್ ಗೌರವ ನಮನ

ನವದೆಹಲಿ, ಅಕ್ಟೋಬರ್ 31, 2019 (www.justkannada.in): ಇಂದು ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 35ನೇ ಪುಣ್ಯತಿಥಿ.

ಇದರ ಅಂಗವಾಗಿ ದೆಹಲಿಯ ಶಕ್ತಿ ಸ್ಥಳದಲ್ಲಿರುವ ಇಂದಿರಾ ಗಾಂಧಿ ಸಮಾಧಿಗೆ ತೆರಳಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರು ಗೌರವ ನಮನ ಸಲ್ಲಿಸಿದರು.

ಇಂದು ಬೆಳಗ್ಗೆ ಇಂದಿರಾ ಗಾಂಧಿಯವರನ್ನು ನೆನೆಸಿಕೊಂಡ ಪ್ರಧಾನಿ ನರೇಂದ್ರ ಮೋದಿ, ದೇಶದ ಹಿಂದಿನ ಪ್ರಧಾನ ಮಂತ್ರಿ ಶ್ರೀಮತಿ ಇಂದಿರಾ ಗಾಂಧಿಯವರಿಗೆ ವಿನಯ ಶ್ರದ್ಧಾಂಜಲಿ ಎಂದು ಟ್ವೀಟ್ ಮಾಡಿದ್ದಾರೆ. ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ತಮ್ಮ ಅಜ್ಜಿಯವರನ್ನು ನೆನೆದು ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ.