ಶಾಸಕ ಯಶವಂತರಾಯಗೌಡ ಪಾಟೀಲ್ ಗೆ ಸಚಿವ ಸ್ಥಾನಕ್ಕೆ ಆಗ್ರಹ: ಸಿಎಂ ಮನೆ ಮುಂದೆ ಪ್ರತಿಭಟನೆ

ಬೆಂಗಳೂರು,ಜೂನ್,16,2026 (www.justkannada.in): ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ ತೀವ್ರಗೊಂಡಿದ್ದು ಸಚಿವ ಸಂಪುಟ ವಿಸ್ತರಣೆಗೆ ಶಾಸಕರ ಒತ್ತಡ ಜೋರಾಗಿದೆ. ಈ ಮಧ್ಯೆ  ಶಾಸಕ ಯಶವಂತರಾಯಗೌಡ ಪಾಟೀಲ್ ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಬೆಂಬಲಿಗರು ಸಿಎಂ ಡಿಕೆ ಶಿವಕುಮಾರ್ ನಿವಾಸದ ಬಳಿ ಪ್ರತಿಭಟನೆ ನಡೆಸಿದ್ದಾರೆ.

ವಿಜಯಪುರ ಜಿಲ್ಲೆ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರು ಅಭಿಮಾನಿಗಳು ಪಟ್ಟು ಹಿಡಿದಿದ್ದು ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇಂದು ಸಿಎಂ ಡಿಕೆ ಶಿವಕುಮಾರ್ ನಿವಾಸದ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ರಚನೆಯಾಗಿ ಎರಡು ವಾರ ಕಳೆದಿದ್ದು ಈ ಮಧ್ಯೆ ಸಚಿವ ಸಂಪುಟ ವಿಸ್ತರಣೆಗೆ ಶಾಸಕರ ಒತ್ತಡ ಹೆಚ್ಚಾಗಿದೆ. ಹಾಗೆಯೇ ಶಾಸಕರು ದೆಹಲಿಯತ್ತ ತೆರಳಿಗೆ ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಗೆ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಾರೆ.

Key words: Protest, CM’s house, ministerial post, MLA Yashwant Raya Gowda Patil