Thursday, September 17, 2026

BDA Apartments

ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಜನ್ಮದಿನ: ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪು...
Home Front Page ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಜನ್ಮದಿನ: ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪನಮನ

ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಜನ್ಮದಿನ: ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪನಮನ

ನವದೆಹಲಿ, ಅಕ್ಟೋಬರ್ 31, 2019 (www.justkannada.in): ಇಂದು ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ 144ನೇ ಜನ್ಮದಿನದ ಹಿನ್ನೆಲೆ ಗುಜರಾತ್‌ ನಲ್ಲಿರುವ ಏಕತಾ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಪುಷ್ಪನಮನ ಸಲ್ಲಿಸಿದರು.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿ ಪಟೆಲ್ ಚೌಕ್ ನಲ್ಲಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಪುತ್ತಳಿಗೆ ಪುಷ್ಪನಮನ ಸಲ್ಲಿಸಿದ್ದಾರೆ. ಜೊತೆಗೆ ದೆಹಲಿಯ ನ್ಯಾಷನಲ್​ ಸ್ಟೇಡಿಯಂನಲ್ಲಿ ‘ಏಕತೆಯ ಓಟಕ್ಕೆ’ ಚಾಲನೆ ನೀಡಿದರು.

ಏಕತಾ ದಿವಸದ ಅಂಗವಾಗಿ ಗುಜರಾತಿನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜೊತೆಗೆ ಇಂದು ಮೋದಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.