Thursday, July 30, 2026

BDA Apartments

Home Front Page ಕನಕಪುರದಲ್ಲಿ ಮೆಡಿಕಲ್ ಕಾಲೇಜು: ಡಿಕೆಶಿಗೆ ಟಾಂಗ್ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ಕನಕಪುರದಲ್ಲಿ ಮೆಡಿಕಲ್ ಕಾಲೇಜು: ಡಿಕೆಶಿಗೆ ಟಾಂಗ್ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಅಕ್ಟೋಬರ್ 31, 2019 (www.justkannada.in): ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಬಿಗ್ ಶಾಕ್ ನೀಡಿದ್ದಾರೆ.

ಕನಕಪುರದಲ್ಲಿ ಮೆಡಿಕಲ್ ಕಾಲೇಜ್ ಆರಂಭಿಸಲು ಪಟ್ಟು ಹಿಡಿದಿದ್ದ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಟಾಂಗ್ ನೀಡಿದ್ದಾರೆ. ತಾಲೂಕಿಗೊಂದು ಮೆಡಿಕಲ್ ಕಾಲೇಜು ಕೊಡೋಕೆ ಆಗಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಕನಕಪುರದಲ್ಲಿ ಮೆಡಿಕಲ್ ಕಾಲೇಜು ಆರಂಭಿಸಬೇಕು. ಇಲ್ಲಿನ ಕಾಲೇಜು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಬಾರದು. ಪ್ರಾಣ ಹೋದರೂ ಮೆಡಿಕಲ್ ಕಾಲೇಜು ವಿಚಾರವಾಗಿ ಹೋರಾಟ ನಡೆಸುತ್ತೇನೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲಾಗುವುದು. ತಾಲೂಕಿಗೊಂದು ಮೆಡಿಕಲ್ ಕಾಲೇಜು ಕೊಡೋಕೆ ಆಗಲ್ಲ ಎಂದಿದ್ದಾರೆ.