ಅನರ್ಹರಿಗೆ ಗ್ಯಾರಂಟಿ ಹೋಗಬಾರದು: ಹೀಗಾಗಿ ತಾಂತ್ರಿಕ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜೂನ್,19,2026 (www.justkannada.in): ಮೃತಪಟ್ಟವರಿಗೂ ಗ್ಯಾರಂಟಿ ಯೋಜನೆಯ ಹಣ ಹೋಗುತ್ತಿದೆ ಎಂಬ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಗ್ಯಾರಂಟಿಗಳನ್ನ ಪರಿಷ್ಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ಡಿಕೆ ಶಿವಕುಮಾರ್ ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಅನರ್ಹ ಇದ್ದವರಿಗೆ ಗ್ಯಾರಂಟಿ ಯೋಜನೆಗಳು ಹೋಗಬಾರದು. ಹೀಗಾಗಿ ತಾಂತ್ರಿಕವಾಗಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಮೃತರ ಖಾತೆಗೂ ಹಣ ಹೋಗುತ್ತಿದೆ ಹೀಗಾಗಿ ಕ್ರಮ ಕೈಗೊಳ್ಳಬೇಕಾಗಿದೆ. ಅಂಕಿ ಅಂಶ ಇದೆ.  ಸರ್ಕಾರದ ಬೊಕ್ಕಸಕ್ಕೆ ನಷ್ಟ ಆಗುತ್ತಿದೆ. ಕೂಡಲೇ ತಡೆ ಹಿಡಿಯಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: Guarantee, ineligible, Minister, Priyank Kharge