Wednesday, September 23, 2026

BDA Apartments

Home Crime ಭಾರೀ ಅಗ್ನಿ ದುರಂತ: 14 ಮಂದಿ ಸಜೀವ ದಹನ

ಭಾರೀ ಅಗ್ನಿ ದುರಂತ: 14 ಮಂದಿ ಸಜೀವ ದಹನ

ಲಖನೌ,ಜೂನ್,22,2026 (www.justkannada.in):  ಉತ್ತರ ಪ್ರದೇಶದ ಲಖನೌದ ಅಲಿಗಂಜ್ ನಲ್ಲಿ ಭೀಕರ ಅಗ್ನಿದುರಂತ ಸಂಭವಿಸಿದ 14 ಮಂದಿ  ಸಜೀವದಹನವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಉಷಾ ಮೆಹ್ತಾ ಮಾರ್ಗದಲ್ಲಿರುವ ಈ ವಾಣಿಜ್ಯ ಕಟ್ಟಡದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಭಾರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದ್ದು14 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಪ್ರಾಣವನ್ನು ಉಳಿಸಿಕೊಳ್ಳಲು ಹಲವರು ಕಟ್ಟಡದಿಂದ ಜಿಗಿದಿದ್ದಾರೆ.  ಬೆಂಕಿ ಕಾಣಿಸಿಕೊಂಡ ಪರಿಣಾಮ, ದಟ್ಟ ಹೊಗೆ ಆವರಿಸಿಕೊಂಡಿತ್ತು. ಭಾರೀ ಅಗ್ನಿ ದುರಂತ: 14 ಮಂದಿ ಸಜೀವ ದಹನ BDA JK_Adv BDA Adv

ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ತಕ್ಷಣ ಸ್ಥಳಕ್ಕೆ ಆಗಮಿಸಿದ್ದು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ದುರಂತ ಸಂಭವಿಸಿದೆ ಎನ್ನಲಾಗಿದೆ.ಭಾರೀ ಅಗ್ನಿ ದುರಂತ jk02_new jk02 new

ಘಟನೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Key words: Massive, fire disaster, 14 people, burnt, alive