Wednesday, October 7, 2026

BDA Apartments

Selfless service BDA JK_Adv BDA Adv
Home Front Page ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಂಕರಪ್ಪ ಅವರಿಗೆ ‘ ಸೇವಾರತ್ನ ‘ ಪ್ರಶಸ್ತಿ.

ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಂಕರಪ್ಪ ಅವರಿಗೆ ‘ ಸೇವಾರತ್ನ ‘ ಪ್ರಶಸ್ತಿ.

 

ರಾಮನಗರ, ಅ.31, 2019 :(www.justkannada.in news ) ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಂಕರಪ್ಪ ಈ ಸಾಲಿನ ‘ ಸೇವಾರತ್ನ ‘ ಪ್ರಶಸ್ತಿಗೆ ಭಾಜನರಾದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಮನಗರ ಜಿಲ್ಲಾ ಶಾಖೆಯ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ರಾಜ್ಯ ಸರ್ಕಾರಿ ನೌಕರರ ಸೇವಾರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಂಕರಪ್ಪ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಇದೇ ವೇಳೆ , ಉತ್ತಮ ಸಾರ್ಥಕ ಸೇವೆಯನ್ನ ಸಲ್ಲಿಸಿದ ವಿವಿಧ ಕ್ಷೇತ್ರದ ಅಧಿಕಾರಿಗಳು, ನೌಕರರನ್ನು ಗುರುತಿಸಿ ಅಭಿನಂದಿಸಲಾಯಿತು. ಒಟ್ಟು ೩೨ ಮಂದಿ ಸರ್ಕಾರಿ ನೌಕರರಿಗೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರತಿಭಾ ಪುರಸ್ಕಾರಕ್ಕೆ ಬಾಜನರಾದ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ಮಕ್ಕಳನ್ನು ಸಹ ಅಭಿನಂದಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷರಾದ ಭೈರಲಿಂಗಯ್ಯನವರು ವಹಿಸಿದ್ದರು.

ವೇದಿಕೆಯಲ್ಲಿ ಮಾಗಡಿ ಕ್ಷೇತ್ರದ ಶಾಸಕರಾದ ಎ.ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಅ.ದೇವೇಗೌಡ, ಕೇಂದ್ರ ಸಂಘದ ಗೌರವಾಧ್ಯಕ್ಷ ಶಿವರುದ್ರಯ್ಯ ಮತ್ತು ಇತರರು ಉಪಸ್ಥಿತರಿದ್ದರು

 

key words : ramanagara-information-department-sevarathna-awardfeliciation-shankarappa