ಬೆಂಗಳೂರು,ಜೂನ್,29,2026 (www.justkannada.in): ನಾಳೆಯಿಂದ ರಾಜ್ಯದಲ್ಲಿ ಎಸ್ ಐಆರ್ ಪ್ರಕ್ರಿಯೆ ಆರಂಭಗೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಡಾ.ಜಿ.ಪರಮೇಶ್ವರ್, ಎಸ್ ಐಆರ್ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ಎಚ್ಚರಿಕೆಯಿಂದ ಇರಲು ಕಾರ್ಯಕರ್ತರು ಬಿಎಲ್ ಒಗಳಿಗೆ ಸೂಚನೆ ನೀಡಲಾಗಿದೆ ಪಶ್ಚಿಮ ಬಂಗಾಳದಲ್ಲಿ ಪ್ರತಿ ಕ್ಷೇತ್ರದಲ್ಲಿ 5 ರಿಂದ 10 ಸಾವಿರ ಮತ ಡಿಲೀಟ್ ಆಗಿವೆ. ಕರ್ನಾಟಕ ರಾಜ್ಯದಲ್ಲಿ ಆ ರೀತಿ ಆಗದಂತೆ ಎಚ್ಚರವಹಿಸಬೇಕು. ಎಸ್ ಐಆರ್ ವಿರುದ್ದ ಹೋರಾಟ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಹಿತಿ ಇಲ್ಲ. ಸಚಿವ ಸಂಪುಟದ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದರು.
Key words: SIR, process, state, DCM, G.Parameshwar






