ಬಿಡದಿ ಟೌನ್ ಶಿಪ್ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುವ ಅವಶ್ಯಕತೆ ಇಲ್ಲ-ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಜೂನ್,29,2026 (www.justkannada.in):  ಬಿಡದಿ ಟೌನ್ ಶಿಪ್ ವಿಚಾರವನ್ನು ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ಬಿಡದಿ ಟೌನ್ ಶಿಪ್ ವಿರೋಧಿಸಿ ಅಪ್ಪಿಕೋ ಚಳವಳಿ ವಿಚಾರ, ಜೆಡಿಎಸ್ ಬಿಜೆಪಿ ರೈತರು ಹೋರಾಟ ಮಾಡುತ್ತಿದ್ದಾರೆ ನೋಡಿದ್ದೇವೆ. ಈ ಬಗ್ಗೆ ಸಿಎಂ ಅಧ್ಯಕ್ಷರು ವರಿಷ್ಠರು ನಿರ್ಣಯ ಮಾಡುತ್ತಾರೆ ಬಿಡದಿ ಟೌನ್ ಶಿಪ್ ಬಗ್ಗೆ ಸಾಧಕ ಬಾಧಕ ಬಗ್ಗೆ ಚರ್ಚೆ ಮಾಡುತ್ತಾರೆ ಎಂದರು.

ಸಂಪುಟದಲ್ಲಿ ಬಿಡದಿ ವಿಚಾರ ಚರ್ಚೆ ಮಾಡಬೇಕು ಅಂತ ಏನಿಲ್ಲ. ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಬೇಕು ಅನ್ನೋ ಅವಶ್ಯಕತೆ ಇಲ್ಲ.  ಸಿಎಂ ಕೂಡ ಚರ್ಚೆ ಮಾಡಿ ನಿರ್ಧಾರ ಮಾಡುತ್ತಾರೆ ಒಬ್ಬೊಬ್ಬರು ನಮ್ಮ ಅಭಿಪ್ರಾಯ ಹೇಳುತ್ತೇವೆ. ಜನ ಕೂಡ ಈಗಾಗಲೇ  ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಡಿಸಿದ್ದಾರೆ ಎಂದರು.

Key words: no discuss, Bidadi Township, Cabinet, Minister, Satish Jarkiholi