ಬೆಂಗಳೂರು,ಜುಲೈ,2,2026 (www.justkannada.in): ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು ವೇತನ ಹೆಚ್ಚಳ ಮಾಡಿ ಆದೇಶಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗೆ ಮೂಲ ವೇತನದಲ್ಲಿ ಶೇ.12.5ರಷ್ಟು ಹೆಚ್ಚಳ ಮಾಡಲಾಗಿದೆ. ಸಾರಿಗೆ ನೌಕರರ ಮೂಲ ವೇತನ ಈ ತಿಂಗಳಿನಿಂದ ಹೆಚ್ಚಳವಾಗಲಿದ್ದು, 2025 ಮಾರ್ಚ್ 31ರ ಮೂಲ ವೇತನದ ಮೇಲೆ ಅನ್ವಯವಾಗಲಿದೆ. ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ ಡಬ್ಲ್ಯುಕೆಆರ್ ಟಿಸಿ ಹಾಗೂ ಕೆಕೆಆರ್ ಟಿಸಿ ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1.05 ಲಕ್ಷಕ್ಕೂ ಹೆಚ್ಚು ನೌಕರರಿಗೆ ಈ ವೇತನ ಹೆಚ್ಚಳದ ಪ್ರಯೋಜನ ಸಿಗಲಿದೆ.
ನೌಕರರಿಗೆ ಬಾಕಿಯಾಗಿದ್ದ ಹಿಂಬಾಕಿ ಮೊತ್ತದ ಮೊದಲ ಕಂತನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಉಳಿದ ಮೊತ್ತವನ್ನು ಹಂತ ಹಂತವಾಗಿ ಮುಂದಿನ ತಿಂಗಳುಗಳಲ್ಲಿ ಪಾವತಿಸಲಾಗುವುದು ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಚಾಲಕರು, ನಿರ್ವಾಹಕರು, ತಾಂತ್ರಿಕ ವಿಭಾಗದ ಸಿಬ್ಬಂದಿ ಹಾಗೂ ಆಡಳಿತ ಸಿಬ್ಬಂದಿ ಸೇರಿದಂತೆ ಎಲ್ಲಾ ವಿಭಾಗದ ನೌಕರರಿಗೆ ಈ ಪರಿಷ್ಕರಣೆ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.
Key words: Good news, transport employees, 12.5% salary, hike







