Tuesday, August 18, 2026

BDA Apartments

Home Crime SIR ಕಾರ್ಯಕ್ಕೆ ತೆರಳುತ್ತಿದ್ದ ವೇಳೆ ಅಪಘಾತ: ಗಂಭೀರ ಗಾಯಗೊಂಡಿದ್ದ ಗ್ರಾಮ ಲೆಕ್ಕಾಧಿಕಾರಿ ಸಾವು

SIR ಕಾರ್ಯಕ್ಕೆ ತೆರಳುತ್ತಿದ್ದ ವೇಳೆ ಅಪಘಾತ: ಗಂಭೀರ ಗಾಯಗೊಂಡಿದ್ದ ಗ್ರಾಮ ಲೆಕ್ಕಾಧಿಕಾರಿ ಸಾವು

ತುಮಕೂರು,ಜುಲೈ,4,2026 (www.justkannada.in): SIR ಕಾರ್ಯಕ್ಕಾಗಿ ತೆರಳುತ್ತಿದ್ದ  ವೇಳೆ ಅಪಘಾತವಾಗಿ ಗಂಭೀರವಾಗಿ ಗಾಯಗೊಂಡಿದ್ದ ಗ್ರಾಮಲೆಕ್ಕಾಧಿಕಾರಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ವಿಎಒ ಭುವನಾ ಮೃತಪಟ್ಟವರು. ತುಮಕೂರು ತಾಲೂಕಿನ ಗೂಳೂರು ಗ್ರಾಮದ ಬಳಿ ಅಪಘಾತ ಸಂಭವಿಸಿತ್ತು. ಎಸ್ ಐಆರ್ ಕರ್ತವ್ಯಕ್ಕೆ ತೆರಳುತ್ತಿದ್ದ ವಿಎಒ ಭುವನಾ ಅವರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿತ್ತು. ಈ ವೇಳೆ ಭುವನ ಸೇರಿ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದರು.

ಭುವನರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭುವನ  ಹೆಲ್ಮೆಟ್ ಧರಿಸಿದ್ದರೂ ತಲೆಗೆ ಗಂಭೀರ ಗಾಯವಾಗಿತ್ತು ಎನ್ನಲಾಗಿದೆ. ಆದರೆ ಇದೀಗ ಭುವನ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Accident, SIR, work,  Village Accountant, died,