ಬೆಂಗಳೂರು,ಜುಲೈ,6,2026 (www.justkannada.in): ರಾಜ್ಯದಲ್ಲಿ ನಡೆಯುತ್ತಿರುವ ಎಸ್ ಐಆರ್ ಪ್ರಕ್ರಿಯೆ ವೇಳೆ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಇಂದು ಬೆಂಗಳೂರಿನ ರಾಜ್ಯ ಚುನಾವಣಾ ಕಚೇರಿಗೆ ಆಗಮಿಸಿದ ಜೆಡಿಎಸ್ – ಬಿಜೆಪಿ ನಾಯಕರು ದೂರು ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ದೂರು ಸಲ್ಲಿಸಿದ್ದಾರೆ.
ಈ ವೇಳೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಶಾಸಕ ಅಶ‍್ವಥ್ ನಾರಾಯಣ್, ಎಂಎಲ್ ಸಿ ಸಿಟಿ ರವಿ ಸೇರಿ ಹಲವರು ಉಪಸ್ಥಿತರಿದ್ದರು.
Key words: SIR, Complaint, JDS, BJP, leaders, Election Commission







