Thursday, October 8, 2026

BDA Apartments

Home Front Page ಮತದಾರರ ಹಕ್ಕುಗಳ ಸಂರಕ್ಷಿಸುವ ನಿಟ್ಟಿನಲ್ಲಿಸಮನ್ವಯದಿಂದ ಕಾರ್ಯನಿರ್ವಹಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ

ಮತದಾರರ ಹಕ್ಕುಗಳ ಸಂರಕ್ಷಿಸುವ ನಿಟ್ಟಿನಲ್ಲಿಸಮನ್ವಯದಿಂದ ಕಾರ್ಯನಿರ್ವಹಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಜುಲೈ, 7,2026 (www.justkannada.in): ಮತದಾರರ ಹಕ್ಕುಗಳ ಸಂರಕ್ಷಿಸುವ ನಿಟ್ಟಿನಲ್ಲಿ ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಸ್ಥಾನ ಪಡೆಯುವಂತೆ ಪಕ್ಷದ ಎಲ್ಲ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಆದೇಶದ ಮೇರೆಗೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತಂತೆ ಇಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಚರ್ಚೆ ನಡೆಸಲಾಯಿತು. ಪಕ್ಷದ ಕಾರ್ಯಕರ್ತರು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅರ್ಹ ಮತದಾರರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಸಿಕೊಳ್ಳುವುದು, ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳುವುದು ಹಾಗೂ ಇತರೆ ಸೂಕ್ತ ಬದಲಾವಣೆಗಳನ್ನು ಮಾಡಿಸಿಕೊಳ್ಳಲು ಸರಿಯಾದ ಮಾರ್ಗದರ್ಶನ ಮತ್ತು ಅರಿವು ಮೂಡಿಸಬೇಕು ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.

ಮತದಾರರ ಹಕ್ಕುಗಳ ಸಂರಕ್ಷಿಸುವ ನಿಟ್ಟಿನಲ್ಲಿ ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಸ್ಥಾನ ಪಡೆಯುವಂತೆ ಪಕ್ಷದ ಎಲ್ಲ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು, ಯುವುದೇ ಒಬ್ಬ ಮತದಾರನಿಗೂ ತಿಳುವಳಿಕೆ ಇಲ್ಲದೇ ಮತದಾನದ ಹಕ್ಕು ತಪ್ಪದಂತೆ ನಿಗಾ ವಹಿಸಬೇಕು ಎಂದು ಅವರು ಕರೆ ನೀಡಿದರು.

ಸಭೆಯಲ್ಲಿ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ. ಬಿ.ಜೆ. ವಿಜಯ್ ಕುಮಾರ್, ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷರಾದ ಆರ್. ಮೂರ್ತಿ, ಕೆಪಿಸಿಸಿ ವಕ್ತಾರರಾದ ಎಂ. ಲಕ್ಷ್ಮಣ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.ಸಚಿವ ಯತೀಂದ್ರ ಸಿದ್ದರಾಮಯ್ಯ jk02_new jk02 new

Key words: Meeting, Congress Office, SIR, Minister, Yathindra Siddaramaiah