Friday, October 9, 2026

BDA Apartments

Increase in COVID cases: DC’s village stay program with held BDA JK_Adv BDA Adv
Home Front Page ಒಡಿಶಾದ ಎಸ್‌ ಒಎ ವಿವಿಯಿಂದ  ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್

ಒಡಿಶಾದ ಎಸ್‌ ಒಎ ವಿವಿಯಿಂದ  ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್

ಬೆಂಗಳೂರು,ಜುಲೈ,10,2026 (www.justkannada.in): ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ಶ್ರೀಪಾದ್ ದೀಕ್ಷಿತ್ ಅವರಿಗೆ ಒಡಿಶಾದ ಸಿಕ್ಷಾ ‘ಓ’ ಅನುಸಂಧಾನ್ (SOA) ಡೀಮ್ಡ್ ಟು ಬಿ ಯುನಿವರ್ಸಿಟಿ ಗೌರವ ಡಾಕ್ಟರೇಟ್ (Honoris Causa) ಪ್ರದಾನ ಮಾಡಲು ನಿರ್ಧರಿಸಲಾಗಿದೆ.

ಜುಲೈ 18, 2026ರಂದು ಬೆಳಿಗ್ಗೆ 11 ಗಂಟೆಗೆ ಭುವನೇಶ್ವರದ ಎಸ್‌ ಒಎ ವಿಶ್ವವಿದ್ಯಾಲಯದ ವಿಶೇಷ ಘಟಿಕೋತ್ಸವದಲ್ಲಿ ಈ ಗೌರವ ಪ್ರದಾನ ಮಾಡಲಾಗುತ್ತದೆ. ಈ ಸಮಾರಂಭದಲ್ಲಿ ಅತಿಥಿ ಗೌರವವಾಗಿ ಭಾಗವಹಿಸಿ ವಿದ್ಯಾರ್ಥಿಗಳು ಹಾಗೂ ಸಂಶೋಧಕರನ್ನು ಉದ್ದೇಶಿಸಿ ಭಾಷಣ ಮಾಡುವಂತೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪ್ರದೀಪ್ ಕುಮಾರ್ ನಂದಾ ಅವರು ನ್ಯಾಯಮೂರ್ತಿ ದೀಕ್ಷಿತ್ ಅವರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ.ಒಡಿಶಾದ ಎಸ್‌ ಒಎ ವಿವಿಯಿಂದ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟ...

ನ್ಯಾಯಮೂರ್ತಿ ಕೃಷ್ಣ ಶ್ರೀಪಾದ್ ದೀಕ್ಷಿತ್ ಅವರು ಕಾನೂನು ಕ್ಷೇತ್ರಕ್ಕೆ ನೀಡಿರುವ ವಿಶಿಷ್ಟ ಕೊಡುಗೆ, ನ್ಯಾಯದ ಪರವಾದ ಅಚಲ ಬದ್ಧತೆ, ನೈತಿಕ ಮೌಲ್ಯಗಳ ಪಾಲನೆ ಹಾಗೂ ಕಾನೂನು ವೃತ್ತಿಯ ಮೇಲೆ ಬೀರಿರುವ ಶಾಶ್ವತ ಪ್ರಭಾವವನ್ನು ಪರಿಗಣಿಸಿ ಕಾನೂನು ವಿಭಾಗದಲ್ಲಿ ಗೌರವ ಡಾಕ್ಟರೇಟ್ (Honoris Causa in Law) ನೀಡಲಾಗುತ್ತಿದೆ.ಒಡಿಶಾದ ಎಸ್‌ ಒಎ ವಿವಿಯಿಂದ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟ...

ಇನ್ನು ಎಸ್‌ ಒಎ ವಿಶ್ವವಿದ್ಯಾಲಯವು ಯುಜಿಸಿ ಮಾನ್ಯತೆ ಪಡೆದ ಡೀಮ್ಡ್ ವಿಶ್ವವಿದ್ಯಾಲಯವಾಗಿದ್ದು, NAAC A++ ಶ್ರೇಯಾಂಕ ಮತ್ತು NIRF ದೇಶದ ಅಗ್ರ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಶಿಕ್ಷಣ ಸಂಸ್ಥೆಯಾಗಿದೆ. ವಿಶ್ವವಿದ್ಯಾಲಯವು ಶಿಕ್ಷಣ, ಸಂಶೋಧನೆ ಹಾಗೂ ನಾವೀನ್ಯತೆಯ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದೆ.university jk02_new jk02 new

Key words: Justice, Krishna S. Dixit,  honorary doctorate, SOA University, Odisha