Friday, October 9, 2026

BDA Apartments

Increase in COVID cases: DC’s village stay program with held BDA JK_Adv BDA Adv
Home Front Page ಅಮಿತ್ ಶಾ ವೈಫಲ್ಯ ಅಂತಾ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಿ- ಬಿ.ಕೆ ಹರಿಪ್ರಸಾದ್ ತಿರುಗೇಟು

ಅಮಿತ್ ಶಾ ವೈಫಲ್ಯ ಅಂತಾ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಿ- ಬಿ.ಕೆ ಹರಿಪ್ರಸಾದ್ ತಿರುಗೇಟು

ಬೆಂಗಳೂರು,ಜುಲೈ,10,2026 (www.justkannada.in): ರಾಜ್ಯ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ (PRC) – 2026’ ನಿಯಮಾವಳಿಗೆ ಆಕ್ಷೇಪ ವ್ಯಕ್ತಪಡಿಸಿ ಕೇಂದ್ರ ಗೃಹ ಸಚಿವ  ಅಮಿತ್ ಶಾ ಅವರಿಗೆ ಪತ್ರ ಬರೆದಿರುವ  ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಬಿಕೆ ಹರಿಪ್ರಸಾದ್,  ಶೋಭಾ ಕರಂದ್ಲಾಜೆ ಪತ್ರ ಬರೆಯಬೇಕಿರುವುದು ರಾಷ್ಟ್ರಪತಿಗಳಿಗೆ.   ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಅಕ್ರಮ ವಲಸಿಗರ ಬಗ್ಗೆ ಹೇಳಿಕೆ ನೀಡಿದ್ದಾರೆ. ಅಕ್ರಮ ವಲಸಿಗರನ್ನ ಗಡಿಯೊಳಗೆ ಬಿಟ್ಟವರು ಯಾರು?   ಅಮಿತ್ ಶಾ ವೈಪಲ್ಯ ಅಂತಾ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಿ ಎಂದು ಟಾಂಗ್ ಕೊಟ್ಟರು.

ರಾಜ್ಯ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ (PRC) – 2026’ ನಿಯಮಾವಳು, ಈ ಆದೇಶವು ಭಾರತದ ಸಂವಿಧಾನದ ಆಶಯಗಳಿಗೆ ಧಕ್ಕೆ ತರುತ್ತದಲ್ಲದೆ, ದೇಶದ ಆಂತರಿಕ ಭದ್ರತೆಗೆ ದೊಡ್ಡ ಕಂಟಕವಾಗಲಿದೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸುದೀರ್ಘ ಪತ್ರ ಬರೆದಿದ್ದಾರೆ. ಈ ವಿಚಾರದಲ್ಲಿ ತಕ್ಷಣವೇ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಅಮಿತ್ ಶಾ ವೈಫಲ್ಯ ಅಂತಾ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಿ jk02_new jk02 new

Key words: Amit Shah, letter, Shobha Karandlaje, B.K. Hariprasad