ಬೆಂಗಳೂರು,ಜುಲೈ,14,2026 (www.justkannada.in): ಫಿಫಾ ವಿಶ್ವಕಪ್ ಪಂದ್ಯಗಳ ಹಿನ್ನೆಲೆಯಲ್ಲಿ ಪಂದ್ಯ ನಡೆಯುವ ಮೂರು ದಿನಗಳ ಕಾಲ ಮಧ್ಯರಾತ್ರಿ 3.30ರವರೆಗೆ ಹೊಟೇಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಆಹಾರ ಸೇವೆಗೆ ಸರ್ಕಾರ ಅವಕಾಶ ಕಲ್ಪಿಸಿದೆ.
ಭಾರತ ರಾಷ್ಟ್ರೀಯ ರೆಸ್ಟೋರೆಂಟ್ ಸಂಸ್ಥೆ ಮನವಿ ಹಿನ್ನೆಲೆಯಲ್ಲಿ ವಿಶ್ವಕಪ್ ಪಂದ್ಯಗಳು ನಡೆಯಲಿರುವ ಜುಲೈ 14, 15ಹಾಗೂ 19ರಂದು ಈ ಆದೇಶ ಅನ್ವಯವಾಗುವಂತೆ ಸರ್ಕಾರ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ತಡರಾತ್ರಿ ಪಂದ್ಯ ಪ್ರದರ್ಶನಕ್ಕೆ ಬೆಂಗಳೂರು ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಆದೇಶಿಸಿದ್ದಾರೆ.
Key words: Good news, government, football, fans, Bengaluru






