ಬೆಂಗಳೂರು,ಜುಲೈ,15,2026 (www.justkannada.in): ಡಿ.ಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಒಂದು ತಿಂಗಳು ಕಳೆದಿದ್ದುಆಗಸ್ಟ್ 6ರಿಂದ ಪ್ರಾರಂಭವಾಗುವ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಮಾಡಲು ಮುಂದಾಗಿದ್ದಾರೆ.
ಈ ಮಧ್ಯೆಇಂದು ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ. ಮಧ್ಯಾಹ್ನ 2 ಗಂಟೆಗೆ ದೆಹಲಿಗೆ ಸಿಎಂ ಡಿಕೆ ಶಿವಕುಮಾರ್ ಪ್ರಯಾಣ ಬೆಳೆಸುತ್ತಿದ್ದು ಇಂದು ರಾತ್ರಿ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿರುವ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ಈಗಾಗಲೇ ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವ ಸಂಫುಟ ವಿಸ್ತರಣೆ ಕಸರತ್ತು ಜೋರಾಗಿದ್ದು ಮಂತ್ರಿಗಿರಿ ಪಡೆಯಲು ಶಾಸಕರ ಲಾಬಿ ಮುಂದುವರೆದಿದೆ. ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುತ್ತಿದ್ದಾರೆ.
Key words: Cabinet expansion, CM, DK Shivakumar, Delhi, today






