ಮೈಸೂರು: ಶ್ರೀರಾಮಕೃಷ್ಣ ವಿದ್ಯಾಶಾಲೆಯಲ್ಲಿ ವಿದ್ಯಾರ್ಥಿ ಸಂಘದಿಂದ ಪ್ರಮಾಣ ವಚನ ಸ್ವೀಕಾರ

ಮೈಸೂರು,ಜುಲೈ,15,2026 (www.justkannada.in): ಮೈಸೂರಿನ ಯಾದವಗಿರಿಯ ಶ್ರೀರಾಮಕೃಷ್ಣ ವಿದ್ಯಾಶಾಲೆಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಪ್ರಮಾಣ ವಚನ ಸ್ವೀಕಾರ ಹಾಗೂ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು.

ಕಾರ್ಯಕ್ರಮವನ್ನು ಶ್ರೀರಾಮಕೃಷ್ಣ ವಿದ್ಯಾಶಾಲೆಯ ಮುಖ್ಯಸ್ಥ ಸ್ವಾಮಿ ಯುಕ್ತೇಶಾನಂದಜೀ ಉದ್ಘಾಟಿಸಿ ಸ್ವಾಗತಿಸಿದರು. ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ, ಮುಖ್ಯ ಅತಿಥಿಗಳಿಂದ ಬ್ಯಾಡ್ಜ್ ವಿತರಿಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಐಪಿಎಸ್ ಮಾತನಾಡಿ, ನಾಯಕತ್ವಕ್ಕೆ ನಂಬಿಕೆ, ಶಿಸ್ತು ಮತ್ತು ಆದರ್ಶ ನಡವಳಿಕೆ ಅಗತ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಶ್ರೀರಾಮಕೃಷ್ಣ ವಿದ್ಯಾಶಾಲೆಯ ಶಿಸ್ತು, ಮೌಲ್ಯಾಧಾರಿತ ಶಿಕ್ಷಣ ಹಾಗೂ ರಾಷ್ಟ್ರ ನಿರ್ಮಾಣದ ಸೇವೆಯನ್ನು ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷರು ಹಾಗೂ ರಾಮಕೃಷ್ಣ ಮಠ-ಮಿಷನ್ ಟ್ರಸ್ಟಿ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್ ಅವರು ವಿದ್ಯಾರ್ಥಿಗಳು ಶಿಸ್ತು, ಪ್ರಾಮಾಣಿಕತೆ ಮತ್ತು ಜವಾಬ್ದಾರಿತನವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಟಿ.ಕೆ. ಚಂದ್ರಶೇಖರ್, ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ENGGLISH SUMMARY…

Student Council Oath-Taking Ceremony Held at Sri Ramakrishna Vidyashala

The oath-taking and inauguration ceremony of the Student Council for the academic year 2026-27 was held at Sri Ramakrishna Vidyashala, Yadavagiri, Mysuru, on Tuesday.

Mysuru City Police Commissioner Seema Latkar, IPS, attended as the chief guest and inspired students with her address on leadership, discipline and integrity. She praised the institution for its value-based education and nurturing future leaders.

Presiding over the function, Swami Muktidanandaji Maharaj, President of Sri Ramakrishna Ashrama and Trustee of Ramakrishna Math and Mission, emphasized the importance of honesty, responsibility and character building.

The newly elected student leaders took the oath of office and were presented with badges during the ceremony. Principal T.K. Chandrashekar, faculty members, staff and students were present.

Key words: Student Union, Mysore, Sri Ramakrishna Vidyashala, Police Commissioner, Seema Latkar