Saturday, October 17, 2026

Dasara Wishes

ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್ DasraWishes_JK DasraWishes JK
Happy Dasara
Home Front Page ಎಂ.ಕೆ ಪ್ರಾಣೇಶ್ ವಿಧಾನಪರಿಷತ್ ಸದಸ್ಯತ್ವ ರದ್ದುಪಡಿಸಿದ ಸುಪ್ರೀಂಕೋರ್ಟ್

ಎಂ.ಕೆ ಪ್ರಾಣೇಶ್ ವಿಧಾನಪರಿಷತ್ ಸದಸ್ಯತ್ವ ರದ್ದುಪಡಿಸಿದ ಸುಪ್ರೀಂಕೋರ್ಟ್

ನವದೆಹಲಿ, ಜುಲೈ, 16,2026 (www.justkannada.in):  ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿಯಾಗಿದ್ದ ಎಂಕೆ ಪ್ರಾಣೇಶ್ ಅವರ ವಿಧಾನ ಪರಿಷತ್ ಸದಸ್ಯತ್ವ ಸ್ಥಾನವನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ.

ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ ಗೆ ಆಯ್ಕೆಯಾಗಿದ್ದ ಎಂ.ಕೆ ಪ್ರಾಣೇಶ್ ಅವರ ಸದಸ್ಯತ್ವವನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಈ ಸಂಬಂಧ ಎಂಕೆ ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಪ್ರತಿಸ್ಪರ್ಧಿ ಗಾಯತ್ರಿ ಶಾಂತೇಗೌಡ ಅವರಿಗೆ ಮೇಲುಗೈ ದೊರೆತಂತಾಗಿದೆ.

ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಈ ಹಿಂದೆ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಎಂಕೆ ಪ್ರಾಣೇಶ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಇದೀಗ ಸುಪ್ರೀಂಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿದ್ದು,  ಪ್ರಾಣೇಶ್ ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದುಪಡಿಸಿದೆ.SIR ವಿವಾದ: ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ವಿರುದ್ಧ ಎಂಕೆ ಪ್ರಾಣೇಶ್ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಚುನಾವಣೆಯಲ್ಲಿ 12 ಮಂದಿ ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸಿದ್ದರು. ಈ ಮತಗಳನ್ನು ಪರಿಗಣಿಸಿರುವ ಕ್ರಮವನ್ನು ಪ್ರಶ್ನಿಸಿ ಗಾಯತ್ರಿ ಶಾಂತೇಗೌಡ ಅವರು ಹೈಕೋರ್ಟ್  ಮೆಟ್ಟಿಲೇರಿದ್ದರು.ಎಂ.ಕೆ ಪ್ರಾಣೇಶ್ ವಿಧಾನಪರಿಷತ್ ಸದಸ್ಯತ್ವ ರದ್ದುಪಡಿಸಿದ ಸುಪ್ರೀಂಕೋರ್ಟ್ BDA J...

ಈ ವೇಳೆ ಹೈಕೋರ್ಟ್ ನಾಮನಿರ್ದೇಶಿತ ಸದಸ್ಯರ ಮತಗಳನ್ನು ಪ್ರತ್ಯೇಕಿಸಿ ಮರು ಮತಎಣಿಕೆ ನಡೆಸುವಂತೆ ಚುನಾವಣಾ ಆಯೋಗಕ್ಕೆ  ನಿರ್ದೇಶನ ನೀಡಿತ್ತು.justkannada mk pranesh

ಬಳಿಕ ಈ ಆದೇಶವನ್ನು ಪ್ರಶ್ನಿಸಿ ಪ್ರಾಣೇಶ್ ಅವರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಮರು ಮತಎಣಿಕೆ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ  ಸೂಚನೆ ನೀಡಿತ್ತು. ಇದೀಗ ಸುಪ್ರೀಂಕೋರ್ಟ್, ಪ್ರಾಣೇಶ್ ಅವರ ಅರ್ಜಿಯನ್ನು ವಜಾಗೊಳಿಸಿದ್ದು ವಿಧಾನ ಪರಿಷತ್ ಸದಸ್ಯತ್ವವನ್ನ ರದ್ದುಪಡಿಸಿದೆ.2026 www justkannada jk02_new jk02 new

Key words: Supreme Court,  cancels, MK Pranesh, MLC, membership