Sunday, September 6, 2026

BDA Apartments

Home Front Page ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..

ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..

ಬೆಂಗಳೂರು ಗ್ರಾಮಾಂತರ,ಜುಲೈ,18,2026 (www.justkannada.in): ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ” ನೀಡಲು ನಾಮ ನಿರ್ದೇಶನಗಳನ್ನು ಸಲ್ಲಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ-2026ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ.

ರಾಜ್ಯ ಪ್ರಶಸ್ತಿಗೆ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ, ಸಂಸ್ಥೆಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗುತ್ತದೆ.

ಆಸಕ್ತರು ತಮ್ಮ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ಆಗಸ್ಟ್ 20 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:206, ಉಪನಿರ್ದೇಶಕರ ಕಛೇರಿ, ದೂ. ಸಂಖ್ಯೆ: 080-29787445 ಅಥವಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಸಿದ್ದಾರೆ.

Key words: Applications, invited, Shourya Award..