ಬೆಂಗಳೂರು,ಜುಲೈ,18,2026 (www.justkannada.in): ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ(85) ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನ ಬುಧವಾರ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಚೆನ್ನಮ್ಮ ಅವರು ಇಂದು ನಿಧನರಾಗಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಚೆನ್ನಮ್ಮ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದವರು ಹಾಗೂ ಆಸ್ಪತ್ರೆ ಮೂಲಗಳು ನಿನ್ನೆಯಷ್ಟೆ ತಿಳಿಸಿದ್ದವು. ಆದರೆ ಇಂದು ಚೆನ್ನಮ್ಮ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿತ್ತು. ಇದೀಗ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
Key words: Former Prime Minister, H.D. Deve Gowda’s, wife, Chennamma, no more.







