ನಾಳೆ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸಾಧ್ಯತೆ

ಬೆಂಗಳೂರು,ಜುಲೈ,18,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಆಸ್ಪತ್ರೆಯತ್ತ ಗಣ್ಯರು ಕುಟುಂಬಸ್ಥರು ಆಗಮಿಸುತ್ತಿದ್ದಾರೆ.

ಈ ನಡುವೆ ಚೆನ್ನಮ್ಮ ಅವರ ಅಂತ್ಯಕ್ರಿಯೆ ನಾಳೆ ಸ್ವಗ್ರಾಮ ಹರದನಹಳ್ಳಿಯ ಮಾವಿನಕೆರೆಯಲ್ಲಿ ನೆರವೇರುವ ಸಾಧ್ಯತೆ ಇದೆ. ಚೆನ್ನಮ್ಮ ಅವರ ಪಾರ್ಥೀವ ಶರೀರವನ್ನ ಕೆಲವೇ ಹೊತ್ತಿನಲ್ಲಿ ಪದ್ಮನಾಭನಗರಕ್ಕೆ ಸ್ಥಳಾಂತರ ಮಾಡಲಿದ್ದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಂತರ ಇಂದು ರಾತ್ರಿ ಅಥವಾ ನಾಳೆ ಬೆಳಿಗ್ಗೆ ಪಾರ್ಥೀವ ಶರೀರವನ್ನ ಸ್ವಗ್ರಾಮಕ್ಕೆ ಸ್ಥಳಾಂತರಿಸಲಿದ್ದು  ನಂತರ ಅಂತ್ಯಕ್ರಿಯೆ ನೇರವೇರಲಿದೆ ಎಂದು ಹೇಳಲಾಗುತ್ತಿದೆ.

ಇನ್ನು ಆಸ್ಪತ್ರೆಯತ್ತ ಗಣ್ಯರು, ಕುಟುಂಬಸ್ಥರು, ಕಾರ್ಯಕರ್ತರು ಭೇಟಿ ನೀಡುವ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆಯನ್ನ ಹೆಚ್ಚಿಸಲಾಗಿದೆ. ಆಸ್ಪತ್ರೆಗೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿದ್ದಾರೆ.

Key words: H.D. Deve Gowda,  wife, Chennamma, funeral