Tuesday, October 6, 2026

BDA Apartments

immense respect BDA JK_Adv BDA Adv
Home Front Page ವೈದ್ಯರ ಮೇಲೆ ಕರವೇ ಕಾರ್ಯಕರ್ತರಿಂದ ಹಲ್ಲೆ ಆರೋಪ:  ಮಿಂಟೋ ಕಣ್ಣಿನ ಆಸ್ಪತ್ರೆ ಸಿಬ್ಬಂದಿಯಿಂದ ಪ್ರತಿಭಟನೆ…

ವೈದ್ಯರ ಮೇಲೆ ಕರವೇ ಕಾರ್ಯಕರ್ತರಿಂದ ಹಲ್ಲೆ ಆರೋಪ:  ಮಿಂಟೋ ಕಣ್ಣಿನ ಆಸ್ಪತ್ರೆ ಸಿಬ್ಬಂದಿಯಿಂದ ಪ್ರತಿಭಟನೆ…

ಬೆಂಗಳೂರು,ನ,2,2019(www.justkannada.in):  ಕನ್ನಡ ಮಾತನಾಡುತ್ತಿಲ್ಲವೆಂದು ವೈದ್ಯರ ಮೇಲೆ ಕರವೇ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಿಂಟೋ ಕಣ್ಣಿನ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು.

ಮಿಂಟೋ ಕಣ್ಣಿನ ಆಸ್ಪತ್ರೆ ವೈದ್ಯರು ಕನ್ನಡ ಮಾತನಾಡುತ್ತಿಲ್ಲವೆಂದು ಆರೋಪಿಸಿ ಕರವೇ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿಗೌಡ ನೇತೃತ್ವದಲ್ಲಿ ಆಸ್ಪತ್ರೆಗೆ ನುಗ್ಗಿ ಮಹಿಳಾ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಆಸ್ಪತ್ರೆಯ ಕಿರಿಯ ವೈದ್ಯರು , ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಿದರು

ಕರವೇ ಕಾರ್ಯಕರ್ತರಿಂದ ಹಲ್ಲೆ ಹಿನ್ನೆಲೆ ಮಿಂಟೋ ಆಸ್ಪತ್ರೆಯ ಸುಮಾರು 70ಕ್ಕೂ ಹೆಚ್ಚು ಪಿಜಿ ವಿದ್ಯಾರ್ಥಿಗಳು ಹಾಗೂ ವಿಕ್ಟೋರಿಯಾ, ವಾಣಿ ವಿಲಾಸ ಆಸ್ಪತ್ರೆಯ ಕಿರಿಯ ವೈದ್ಯರು ಒಪಿಡಿ ಬಂದ್ ಮಾಡಿ ಧರಣಿ ನಡೆಸಿದ್ದು ಕರವೇ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡರನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ.

Key words: Bangalore-karave- assault- Minto Eye Hospital- Doctors-protest