ನವದೆಹಲಿ,ಜುಲೈ,23,2026 (www.justkannada.n): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಂಸತ್ ನಲ್ಲಿ ವಿಪಕ್ಷಗಳ ಧರಣಿ ಮತ್ತೆ ಮುಂದುವರೆದಿದ್ದು ಕಲಾಪ ಮುಂದೂಡಿಕೆ ಮಾಡಲಾಗಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ ನಡೆಸಿದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಮತ್ತು ಪ್ರಧಾನಿ ಮೋದಿ ವಿದ್ಯಾರ್ಥಿಗಳ ಕ್ಷಮೆ ಕೇಳುವಂತೆ ಆಗ್ರಹಿಸಿ ವಿಪಕ್ಷಗಳು ಸಂಸತ್ ಕಲಾಪದಲ್ಲಿ ಪ್ರತಿಭಟನೆ ಮುಂದುವರೆಸಿದ ಹಿನ್ನೆಲೆ ಮಧ್ಯಾಹ್ನ 2 ಗಂಟೆಗೆ ಕಲಾಪ ಮುಂದೂಡಲಾಗಿದೆ. 
ಪ್ರಧಾನಿ ಮೋದಿ ಅವರ ಟ್ವಿಟ್ ಕುರಿತು ಮಾತನಾಡಿರುವ ಸಚಿವ ಕಿರಣ ರಿಜಿಜು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಚರ್ಚೆಗೆ ಸಿದ್ದ , ಹಲವು ವಿಪಕ್ಷಗಳ ನಾಯಕರ ಜೊತೆ ಮಾತನಾಡಿದ್ದೇವೆ. ಸಂಜೆಯೊಳಗೆ ಒಮ್ಮತಕ್ಕೆ ಬರಲು ವಿಪಕ್ಷಗಳೊಂದಿಗೆ ಚರ್ಚೆ ಮಾಡಲಾಗುತ್ತದೆ ಎಂದಿದ್ದಾರೆ.
Key words: Protest, NEET, Lok Sabha, Rajya Sabha, adjourned,







