Sunday, September 6, 2026

BDA Apartments

Home Front Page 1997ರಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ: ಲಾಠಿ ಚಾರ್ಜ್‌ನಲ್ಲಿ ಗಾಯಗೊಂಡಿದ್ದ ಧರ್ಮೇಂದ್ರ ಪ್ರಧಾನ್!

1997ರಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ: ಲಾಠಿ ಚಾರ್ಜ್‌ನಲ್ಲಿ ಗಾಯಗೊಂಡಿದ್ದ ಧರ್ಮೇಂದ್ರ ಪ್ರಧಾನ್!

ನವದೆಹಲಿ,ಜುಲೈ,23,2026 (www.justkannada.in): ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವಿದ್ಯಾರ್ಥಿ ನಾಯಕರಾಗಿದ್ದ ವೇಳೆ, 1997ರಲ್ಲಿ ಒಡಿಶಾದಲ್ಲಿ ನಡೆದಿದ್ದ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿ ಪೊಲೀಸರ ಲಾಠಿ ಚಾರ್ಜ್‌ಗೆ ಒಳಗಾಗಿದ್ದರು ಎಂಬ ಘಟನೆ ಇದೀಗ ಮತ್ತೆ ಚರ್ಚೆಗೆ ಬಂದಿದೆ.

ವರದಿಗಳ ಪ್ರಕಾರ, 1997ರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದ ಧರ್ಮೇಂದ್ರ ಪ್ರಧಾನ್, ಒಡಿಶಾ ಸರ್ಕಾರದ ವಿರುದ್ಧ ನಡೆದ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸುಮಾರು 1,500 ವಿದ್ಯಾರ್ಥಿಗಳೊಂದಿಗೆ ಭುವನೇಶ್ವರದ ರಾಜ್ಯ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಧರ್ಮೇಂದ್ರ ಪ್ರಧಾನ್ ಗಂಭೀರವಾಗಿ ಗಾಯಗೊಂಡು ಮೂಳೆ ಮುರಿತಕ್ಕೂ ಒಳಗಾಗಿದ್ದರು ಎಂದು ಅವರ ಸಹೋದ್ಯೋಗಿಯಾಗಿದ್ದ ಪ್ರಶಾಂತ್ ರೌತ್ ನೆನಪಿಸಿಕೊಂಡಿದ್ದಾರೆ. ಆದರೆ, ಈ ಘಟನೆಯ ಕುರಿತು ಅಧಿಕೃತ ದಾಖಲೆಗಳ ಮೂಲಕ ಸ್ವತಂತ್ರ ದೃಢೀಕರಣ ಲಭ್ಯವಿಲ್ಲ ಎಂದು ದಿ ಎಕನಾಮಿಕ್ ಟೈಮ್ಸ್ ತನ್ನ ವರದಿಯಲ್ಲಿ ಸ್ಪಷ್ಟಪಡಿಸಿದೆ.

ಪ್ರಸ್ತುತ ನೀಟ್-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಸುಮಾರು ಮೂರು ದಶಕಗಳ ಹಿಂದಿನ ಈ ಘಟನೆ ಮತ್ತೆ ಸಾಮಾಜಿಕ ಜಾಲತಾಣಗಳು ಮತ್ತು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಕೃಪೆ: ಎಕಾನಾಮಿಕ್ ಟೈಮ್ಸ್

Key words: Protest, question paper, leak, 1997, Dharmendra Pradhan, injured, lathi charge