Monday, September 7, 2026

BDA Apartments

Home Front Page ಮಾನ ಮರ್ಯಾದೆ ಇದ್ರೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮಾನ ಮರ್ಯಾದೆ ಇದ್ರೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜುಲೈ,23,2026 (www.justkannada.in): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಮಾನ ಮರ್ಯಾದೆ ಇದ್ದರೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ  ಆಗ್ರಹಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ,  ಶಿಕ್ಷಣ ನೀತಿಯಲ್ಲಿ ಸುಧಾರಣೆ ತರುವಂತೆ ಕೇಳೋದು ತಪ್ಪಾ? 10 ವರ್ಷಗಳಲ್ಲಿ 152 ಪೇಪರ್ ಲೀಕ್ ಪ್ರಕರಣಗಳು ನಡೆದಿವೆ.  ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು.  ಮಾನ ಮರ್ಯದೆ ಇದ್ದರೇ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು.

ಪ್ರಧಾನ್ ಇನ್ನೂ ಎಷ್ಟು ಜನರ ಜೀವ ಹಾಳು ಮಾಡುತ್ತಾರೆ. ಕೋಟ್ಯಾಂತರ ಜನರು ಇವತ್ತು ಬೀದಿಗಿಳಿದು ಹೋರಾಡುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

Key words: Dharmendra Pradhan, resign, Home Minister, Priyank Kharge