Friday, October 30, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಈ ವಾರ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ ಶಿವಕುಮಾರ್

ಈ ವಾರ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ ಶಿವಕುಮಾರ್

ದಸರಾ ಲೈಟಿಂಗ್ಸ್ 10 ದಿನ ವಿಸ್ತರಣೆ ಮಾಡಲು ತೀರ್ಮಾನ- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಜು. 27,2026 (www.justkannada.in): “ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಸಿಎಂ ಡಿಕೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, “ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನೀವು (ಮಾಧ್ಯಮಗಳು) ಆತುರದಲ್ಲಿದ್ದೀರಿ” ಎಂದು ತಿಳಿಸಿದರು.ಈ ವಾರ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ ಶಿವಕುಮಾರ್ BDA JK_Adv BDA Adv

ದೆಹಲಿಯಲ್ಲಿ ಸಂಸದರ ಜೊತೆಗಿನ ಸಭೆ ಬಗ್ಗೆ ಕೇಳಿದಾಗ, “ಇಂದು ನಮ್ಮ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದು, ಅವರಿಗೆ ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ” ಎಂದರು.ಕೆಪಿಎಸ್ ಸಿಗೆ ಹೊಸ ರೂಪ: ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸಮಿತಿ ರಚನೆ- ಸಿಎಂ ಡಿಕೆ ಶಿವಕುಮಾರ್

“ನಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಯಾವ ವಿಚಾರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ಹೋಗುತ್ತಿದ್ದೇನೆ. ನಂತರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ ಜೊತೆಗೂ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗುವುದು” ಎಂದು ತಿಳಿಸಿದರು.ಸಿಎಂ ಡಿ.ಕೆ ಶಿವಕುಮಾರ್ jk02_new jk02 new

Key words: Cabinet expansion, complete, this week, CM, DK Shivakumar