Sunday, September 13, 2026

BDA Apartments

ಆ.1ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ BDA JK_Adv BDA Adv
Home Front Page ಆ.1ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ

ಆ.1ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ

ಮೈಸೂರು,ಜುಲೈ,28,2026 (www.justkannada.in): ಸ್ವಾಮಿ ವಿವೇಕಾನಂದ ಸ್ಮಾರಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಸ್ಟ್ 1ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ.

ಮೈಸೂರಿನ ದೇವರಾಜ ಮೊಹಲ್ಲಾದ ನಾರಾಯಣಶಾಸ್ತ್ರಿ ರಸ್ತೆಯಲ್ಲಿ 45 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಸ್ಮಾರಕ ಹಾಗೂ ಸ್ವಾಮಿ ವಿವೇಕನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.ಆ.1ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ramakrishna ashrama

ಈ ಕುರಿತು ಮಾತನಾಡಿದ ರಾಮಕೃಷ್ಣ ಆಶ್ರಮದ ಮುಕ್ತಿದಾನಂದ ಜೀ ಮಹಾರಾಜ್ , ಸ್ವಾಮಿ ವಿವೇಕಾನಂದ ಸ್ಮಾರಕವನ್ನು 45 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.  ಸ್ವಾಮಿ ವಿವೇಕಾನಂದ ಅವರು ಇಲ್ಲಿ ನೆಲೆಸಿದ್ದರು. ಹೀಗಾಗಿ ಸಾಂಸ್ಕೃತಿಕ ಯುವ ಕೇಂದ್ರ ತೆರೆಯಲಾಗಿದೆ.  ಮೋದಿಯವರು ಸ್ಮಾರಕ ಉದ್ಗಾಟನೆ ಮಾಡಲಿದ್ದಾರೆ ರಾಮಕೃಷ್ಣ ಆಶ್ರಮದಲ್ಲಿ ವಿವೇಕಾನಂದ ಪ್ರತಿಮೆಗೆ ಹೂಗುಚ್ಛ ಸಲ್ಲಿಕೆ ಮಾಡಲಿದ್ದಾರೆ.  ರಾಮಕೃಷ್ಣ ಆಶ್ರಮದ ಆಡಿಟೊರಿಯಂನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, 30 ನಿಮಿಷಗಳ ಕಾಲ ಮೋದಿಯವರು ಆಶ್ರಮದಲ್ಲಿ ಇರಲಿದ್ದಾರೆ ಎಂದು ಮಾಹಿತಿ ನೀಡಿದರು.mysore jk02_new jk02 new

ಕಾರ್ಯಕ್ರಮದಲ್ಲಿ 6ಸಾವಿರ ಜನ ಭಾಗಿಯಾಗಲಿದ್ದಾರೆ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಾಸ್ ವಿತರಣೆ ಮಾಡಲಾಗುತ್ತದೆ. ಪಾಸ್ ಇದ್ದವರಿಗೆ ಮಾತ್ರ ಒಳಗಡೆಗೆ ಎಂಟ್ರಿ ಇರುತ್ತದೆ. ಕಾಲೇಜು ವಿದ್ಯಾರ್ಥಿಗಳು ಸಾರ್ವಜನಿಕರು ಕಾರ್ಯಕ್ರಮಕ್ಕೆ ಬರಲಿದ್ದಾರೆ ವಿವೇಕನಂದರ ಪ್ರತಿಮೆಯನ್ನು ಮೋದಿ ಅವರಿಗೆ ನೀಡಲಾಗುತ್ತೆ  ಎಂದರು.

Key words: Prime Minister, Narendra Modi, Mysore ,August 1