ವಿಪಕ್ಷಗಳಿಂದ ಮುಂದುವರೆದ ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

ನವದೆಹಲಿ,28,2026 (www.justkannada.in):  ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳ ಧರಣಿ ಮುಂದುವರೆದಿದ್ದು ಈ ಹಿನ್ನೆಲೆಯಲ್ಲಿ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ  ಮುಂದೂಡಿಕೆ ಮಾಡಲಾಗಿದೆ.

ಇಂದು ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷಗಳು ವಿದ್ಯಾರ್ಥಿಗಳ ಮೇಲಿನ ಲಾಠಿಚರ್ಚ್ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು. ವಿಪಕ್ಷಗಳ ಗದ್ದಲ ಹಿನ್ನೆಲೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ.

ರಾಜ್ಯಸಭೆಯಲ್ಲೂ ಸಹ ವಿಪಕ್ಷಗಳು ಗದ್ದಲ ಉಂಟುಮಾಡಿದ ಹಿನ್ನೆಲೆಯಲ್ಲಿ ರಾಜ್ಯಸಭೆ ಕಲಾಪವನ್ನೂ ಮುಂದೂಡಿಕೆ ಮಾಡಲಾಗಿದೆ. ಲೋಕಸಭೆಯಲ್ಲಿ ಮಂಡಿಸಲಾಗಿರುವ ಅಕ್ರಮ ತಡೆ ಬಿಲ್ ಬಗ್ಗೆ ಚರ್ಚೆಗೆ ವಿಪಕ್ಷಗಳು ಅವಕಾಶ ನೀಡದೆ ಗದ್ದಲ ಉಂಟು ಮಾಡಿದ ಹಿನ್ನೆಲೆಯಲ್ಲಿ ಕಲಾಪ ಮುಂದೂಡಲಾಗಿದೆ.

Key words: Opposition parties, Protest, Lok Sabha, Rajya Sabha, adjourned