ತಮಿಳುನಾಡಿಗೆ ನೀರು ಹರಿಸಿ: ಕರ್ನಾಟಕಕ್ಕೆ ಶಾಕ್ ನೀಡಿದ  CWRC

ನವದೆಹಲಿ,ಜುಲೈ,28,2026 (www.justkannada.in):  ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು ಕೆಆರ್ ಎಸ್ ಸೇರಿ ರಾಜ್ಯದ ಜಲಾಶಯಗಳು  ಭರ್ತಿಯಾಗದೇ ಕುಡಿಯುವ ನೀರಿಗೂ ಹಾಹಾಕಾರ ಪಡುವ ಪರಿಸ್ಥಿತಿ ಇದೆ.  ಇದೀಗ ಇಂತಹ ಸಂದರ್ಭದಲ್ಲೂ ಇದೀಗ ತಮಿಳುನಾಡಿಗೆ  ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಸಮಿತಿಯು ಸೂಚನೆ ನೀಡಿದೆ.

ಇಂದು ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ. ಮುಂದಿನ 15 ದಿನಗಳವರೆಗೆ ಪ್ರತಿನಿತ್ಯ 3500 ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ.

ರಾಜ್ಯದಲ್ಲಿ ಸರಿಯಾಗಿ ಮಳೆಯಾಗದ ಹಿನ್ನೆಲೆಯಲ್ಲಿ ಕೆಆರ್ ಎಸ್ ಸೇರಿ ಜಲಾಶಯಗಳು  ಭರ್ತಿಯಾಗದೇ ಬರ ಪರಿಸ್ಥಿತಿ ಆವರಿಸಿದೆ. ಈ ನಡುವೆಯೂ ಇದೀಗ ತಮಿಳುನಾಡಿಗೆ ನೀರು ಹರಿಸುವಂತೆ ಸೂಚನೆ ಕೊಟ್ಟಿದೆ. ಆಗಸ್ಟ್ 3 ರಂದು ತಮಿಳುನಾಡಿನ ಸಿಎಂ ವಿಜಯ್ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು ಅಂತು ಮೇಕೆದಾಟು ಯೋಜನೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆಯಾಗುವ ಸಾಧ್ಯತೆ ಇದೆ.

Key words: CWRC, Karnataka, releasing, water , Tamil Nadu