ಬಂಡೀಪುರ ಪರಿಸರ ಸೂಕ್ಷ್ಮ ವಲಯದಲ್ಲಿ ಅಕ್ರಮ ಕಾಮಗಾರಿ ಆರೋಪ; ಕಾನೂನು ಕ್ರಮಕ್ಕೆ ಅರಣ್ಯ ಇಲಾಖೆ ಶಿಫಾರಸು

ಮೈಸೂರು,ಜುಲೈ,28,2026 (www.justkannada.in): ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯ (ESZ) ವ್ಯಾಪ್ತಿಯ ಮಂಗಲ ಗ್ರಾಮದ ಹಲವು ಸರ್ವೆ ನಂಬರ್‌ಗಳಲ್ಲಿರುವ ಜಮೀನಿನಲ್ಲಿ ಅನುಮತಿ ಪಡೆಯದೆ ರಸ್ತೆ ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಕೆ.ವಿ. ಪ್ರಸಾದ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ವರದಿ ಸಲ್ಲಿಸಿದ್ದಾರೆ.

ಅರಣ್ಯ ಇಲಾಖೆ ಪರಿಶೀಲನೆಯಲ್ಲಿ ಜಲ್ಲಿ, ಎಂ-ಸ್ಯಾಂಡ್ ಬಳಸಿ ರಸ್ತೆ ಹಾಗೂ ಕಟ್ಟಡ ನಿರ್ಮಾಣ, ಸೋಲಾರ್ ಬೇಲಿ ನಿರ್ಮಾಣ ಹಾಗೂ ಜಮೀನನ್ನು ವಾಣಿಜ್ಯ ಉದ್ದೇಶದ ಲೇಔಟ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವುದು ಕಂಡುಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಹಿಂದೆ ಕಾಮಗಾರಿ ಸ್ಥಗಿತಗೊಳಿಸುವಂತೆ ಮೌಖಿಕ ಸೂಚನೆ ಹಾಗೂ ನೋಟಿಸ್ ನೀಡಿದ್ದರೂ ಯಾವುದೇ ಅನುಮತಿ ಪಡೆಯದೆ ಕಾಮಗಾರಿ ಮುಂದುವರಿಸಿರುವುದು ಪರಿಸರ ಸಂರಕ್ಷಣಾ ಕಾಯ್ದೆ-1986 ಮತ್ತು ಪರಿಸರ ಸೂಕ್ಷ್ಮ ವಲಯ ಅಧಿಸೂಚನೆಯ ಉಲ್ಲಂಘನೆಯಾಗಿದೆ ಎಂದು ಅರಣ್ಯ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಾನಿಟರಿಂಗ್ ಸಮಿತಿಗೆ ಶಿಫಾರಸು ಮಾಡಲಾಗಿದೆ.

ENGLISH SUMMARY…

Bandipur ESZ: Forest Department seeks action over alleged illegal construction

Mysuru: The Karnataka Forest Department has recommended legal action against K.V. Prasad for allegedly carrying out unauthorized road and building construction in the Eco-Sensitive Zone (ESZ) of the Bandipur Tiger Reserve without obtaining mandatory approvals.

According to the department, inspections found roads, building foundations and other developments that appeared to be part of a commercial layout. Despite earlier notices directing the work to stop, the construction allegedly continued, violating the Environment (Protection) Act, 1986 and ESZ regulations. The matter has been referred to the Bandipur ESZ Monitoring Committee for further action.

Key words: Bandipur, Forest Department,  action, illegal construction