Sunday, September 13, 2026

BDA Apartments

Home Front Page ಕಾಮನ್‌ ವೆಲ್ತ್ ಗೇಮ್ಸ್‌ ನಲ್ಲಿ ಕಂಚಿನ ಪದಕ: ಕನ್ನಡತಿ ಕೆ.ಎಸ್ ಶಿಲ್ಪರಿಗೆ ಅಭಿನಂದನೆ ಸಲ್ಲಿಸಿದ ಕೇಂದ್ರ...

ಕಾಮನ್‌ ವೆಲ್ತ್ ಗೇಮ್ಸ್‌ ನಲ್ಲಿ ಕಂಚಿನ ಪದಕ: ಕನ್ನಡತಿ ಕೆ.ಎಸ್ ಶಿಲ್ಪರಿಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ HDK

ಬೆಂಗಳೂರು,ಜುಲೈ,28,2026 (www.justkannada.in): ಕಾಮನ್‌ ವೆಲ್ತ್ ಗೇಮ್ಸ್‌ ನಲ್ಲಿ ಗುಂಡು ಎಸೆತದಲ್ಲಿ ಕಂಚಿನ ಪದಕಕ್ಕೆ ಕೊರೊಳೊಡ್ಡಿದ ಕನ್ನಡತಿ ಮೈಸೂರಿನ ಕೆ.ಎಸ್ ಶಿಲ್ಪ ಅವರಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿಕೆ,  2026ರ ಕಾಮನ್‌ವೆಲ್ತ್ ಗೇಮ್ಸ್‌ ನ ಮಹಿಳೆಯರ ಶಾಟ್‌ಪುಟ್ F-57 ವಿಭಾಗದಲ್ಲಿ ಭಾರತದ ಪ್ಯಾರಾ ಅಥ್ಲೀಟ್, ಹೆಮ್ಮೆಯ ಕನ್ನಡತಿ ಶಿಲ್ಪಾ ಕೆ.ಶೈಲಾ ಅವರು ಕಂಚಿನ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವುದು ಅತ್ಯಂತ ಸಂತೋಷದ ಸಂಗತಿ. ರಾಷ್ಟ್ರಕ್ಕೆ ಇಂತಹ ಪ್ರೇರಣಾದಾಯಕ ಗೆಲುವು ತಂದುಕೊಟ್ಟ ಶಿಲ್ಪಾ ಅವರನ್ನು ಹೃದಯಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದಿದ್ದಾರೆ.ಕಾಮನ್‌ ವೆಲ್ತ್ ಗೇಮ್ಸ್‌ ನಲ್ಲಿ ಕಂಚಿನ ಪದಕ shilpa

ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಕಂಚುಗಾರಕೊಪ್ಪಲು ಗ್ರಾಮದ ರೈತ ಕುಟುಂಬದ ಕೆ.ಎಸ್. ಶಿಲ್ಪಾ ಅವರು ತಮ್ಮ 4ನೇ ವಯಸ್ಸಿನಲ್ಲಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ತಮ್ಮ ಎಡಗಾಲನ್ನು ಕಳೆದುಕೊಂಡಿದ್ದರು. ಅದರಿಂದ ವಿಚಲಿತಗೊಳ್ಳದೆ ಭಾರತವೇ ಹೆಮ್ಮೆಪಡುವಂತಹ ಸಾಧನೆಯನ್ನು ಅವರು ಮಾಡಿದ್ದಾರೆ. ಅವರ ತರಬೇತುದಾರರು, ಪೋಷಕರನ್ನು ಕೂಡ ನಾನು ಅಭಿನಂದಿಸುತ್ತೇನೆ ಎಂದು ಹೆಚ್ ಡಿಕೆ ತಿಳಿಸಿದ್ದಾರೆ.ಕನ್ನಡತಿ ಕೆ.ಎಸ್ ಶಿಲ್ಪರಿಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ HDK jk02_new jk02 new

Key words: Bronze medal, Commonwealth Games: K.S. Shilpa, Union Minister, HDK