ಮೈಸೂರು,ಜುಲೈ,30,2026 (www.justkannada.in): ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿನಿತ್ಯ 3500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶವನ್ನು ಖಂಡಿಸಿ ರಾಜ್ಯದಲ್ಲಿ ಕಾವೇರಿ ಹೋರಾಟ ಭುಗಿಲೆದ್ದಿದ್ದು ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ನಗರದ ಅಗ್ರಹಾರದ ವೃತ್ತದಲ್ಲಿ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ವತಿಯಿಂದ ಕಾರ್ಯಕರ್ತರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸದಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಇಂದು ಸಿಡಬ್ಲ್ಯುಆರ್ ಸಿ ಆದೇಶ ಖಂಡಿಸಿ ರಾಜ್ಯದಲ್ಲಿ ಕಾವೇರಿ ಹೋರಾಟ ಪ್ರಾರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 2.30ಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ. ಸಭೆಯಲ್ಲಿ ಏನು ತೀರ್ಮಾನವಾಗಲಿದೆ ಕಾದು ನೋಡಬೇಕಿದೆ.
Key words: Cauvery Protest, pro-Kannada organizations, Mysore







