ಮೈಸೂರು, ಜುಲೈ.31,2026 (www.justkannada.in): ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಭಾಗವಾಗಿ ಆಗಸ್ಟ್ 1, 2026ರಂದು ಮೈಸೂರು ನಗರದ ಪ್ರಮುಖ ರಸ್ತೆಗಳು ಹಾಗೂ ಪ್ರಮುಖ ಪ್ರದೇಶಗಳಲ್ಲಿ ಡ್ರೋನ್ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಇಲಾಖೆ ಪ್ರಕಟಿಸಿದೆ.
ಅನುಮತಿ ಇಲ್ಲದೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಡ್ರೋನ್ ಹಾರಾಟ ನಡೆಸಬಾರದು. ನಿಯಮ ಉಲ್ಲಂಘಿಸಿ ಡ್ರೋನ್ ಹಾರಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರು ಯಾವುದೇ ಅನುಮಾನಾಸ್ಪದ ಡ್ರೋನ್ ಚಟುವಟಿಕೆ ಕಂಡುಬಂದಲ್ಲಿ ತಕ್ಷಣವೇ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ನಗರದ ಭದ್ರತೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮೈಸೂರು ನಗರ ಪೊಲೀಸರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ.
Key words: Police department, public, drone, Mysuru city






