ಶಿವಮೊಗ್ಗ,ಆಗಸ್ಟ್,3,2026 (www.justkannada.in): ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು ತಮಗೆ ಸಚಿವ ಕೈತಪ್ಪಿದ್ದಕ್ಕೆ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಬೇಸರ ಹೊರ ಹಾಕಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕ ಬೇಳೂರು ಗೋಪಾಲಕೃಷ್ಣ, ನಾಳೆ ಬೆಳಿಗ್ಗೆ10 ಗಂಟೆಗೆ ನಾನು ರಾಜೀನಾಮೆ ಕೊಡುತ್ತೇನೆ. ನಾನು ಹಿಂದುಳಿದ ವರ್ಗದಿಂದ ಬಂದಿದ್ದೇನೆ. ಆದರೆ ಸಚಿವ ಸ್ಥಾನ ಕೈತಪ್ಪಿದ್ದು ಈ ಹಿನ್ನೆಲೆಯಲ್ಲಿ ಬೇಸರವಾಗಿ ನಾಳೆ ಬೆಳಿಗ್ಗೆ 10 ಗಂಟೆಗೆ ಶಾಸಕ ಸ್ಥಾನ, ನಿಗಮಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.
ನೂತನ ಸಚಿವರ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೆ ಕಾಂಗ್ರೆಸ್ ಪಾಳಯದಲ್ಲಿ ಸಚಿವ ಸ್ಥಾನ ಕೈತಪ್ಪಿದ ಶಾಸಕರ ಬಂಡಾಯ, ಆಕ್ರೋಶ ಭುಗಿಲೆದ್ದಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
Key words: ministerial, position, MLA ,Belur Gopalakrishna, resign







