ಚೆನ್ನೈ, ಆಗಸ್ಟ್,4,2026 (www.justkannada.in): ನಟಿ ತ್ರಿಶಾ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆ ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೋಲಿಸರು ಬಂಧಿಸಿದ್ದಾರೆ.
ತಂಜಾವೂರಿನಲ್ಲಿ ನಡೆದ ಕಾವೇರಿ ನೀರು ವಿವಾದದ ಪ್ರತಿಭಟನೆಯಲ್ಲಿ ನಟಿ ತ್ರಿಷಾ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಮುಖ್ಯಮಂತ್ರಿ ವಿಜಯ್ ನೇತೃತ್ವದ ‘ತಮಿಳಾಗ ವೆಟ್ರಿ ಕಳಗಂ’ (TVK) ಪಕ್ಷ ದೂರು ನೀಡಿತ್ತು. ಈ ದೂರಿನನ್ವಯ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನ ಮನೆಯಿಂದಲೇ ಪೊಲೀಸರು ಬಂಧಿಸಿದ್ದಾರೆ.
ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ಡಿಎಂಕೆ ಆಯೋಜಿಸಿದ್ದ ರೈತರ ಪ್ರತಿಭಟನಾ ಸಭೆಯಲ್ಲಿ ಉದಯನಿಧಿ ಸ್ಟಾಲಿನ್ ಮಾತನಾಡುತ್ತಿದ್ದರು. ಉದಯನಿಧಿ ಅವರು ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾಗ, ಸಭೆಯಲ್ಲಿದ್ದ ಕೆಲವರು ನಟಿ ತ್ರಿಷಾ ಅವರ ಹೆಸರನ್ನು ಘೋಷಣೆ ಮಾಡಿದರು. ಈ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
Key words: Udayanidhi Stalin, arrested , derogatory, actress, Trisha







