Sunday, September 20, 2026

BDA Apartments

ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ಕೆಪಿಸಿಸಿ ಕಚೇರಿಗೆ ‘ಕೈ’ ಕಾರ್ಯಕರ್ತರ ಮು...
Home Front Page ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ಕೆಪಿಸಿಸಿ ಕಚೇರಿಗೆ ‘ಕೈ’ ಕಾರ್ಯಕರ್ತರ ಮುತ್ತಿಗೆ, ಪ್ರತಿಭಟನೆ

ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ಕೆಪಿಸಿಸಿ ಕಚೇರಿಗೆ ‘ಕೈ’ ಕಾರ್ಯಕರ್ತರ ಮುತ್ತಿಗೆ, ಪ್ರತಿಭಟನೆ

ಬೆಂಗಳೂರು,ಆಗಸ್ಟ್,4,2026 (www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೆ ಕಾಂಗ್ರೆಸ್ ನಲ್ಲಿ ಅಸಮಾಧಾನದ ಜ್ವಾಲೆ ಭುಗಿಲೆದ್ದಿದ್ದು ಶಾಸಕ ಕೃಷ್ಣಪ್ಪ ಮತ್ತು ಶಾಸಕ ಹಾಗೂ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅವರ ಬೆಂಬಲಿಗರು ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಮಾಜಿ ಸಚಿವ ದಿನೇಶ್ ಗುಂಡೂರಾವ್ ಬೆಂಬಲಿಗರು ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ. ಹಾಗೆಯೇ ಶಾಸಕ ಕೃಷ್ಣಪ್ಪ ಅವರ ಬೆಂಬಲಿಗರು ಸಹ ಕೆಪಿಸಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದು  ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ congress

ಕೆಪಿಸಿಸಿ ಕಚೇರಿ ಮುಂದೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ವಿಜಯನಗರ, ಗೋವಿಂದರಾಜನಗರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದು ಬ್ಯಾರಿಕೇಡ್ ತಳ್ಳಿ ಕೆಪಿಸಿಸಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ್ದಾರೆ. ಸಂಪುಟ ವಿಸ್ತರಣೆಯಾದ ಬೆನ್ನಲ್ಲೆ ಸಚಿವ ಸ್ಥಾನ ಕೈತಪ್ಪಿದ ಶಾಸಕರು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದು ಕೆಲ ಶಾಸಕರು ರಾಜೀನಾಮೆ ಬೆದರಿಕೆಯನ್ನೂ ಸಹ ಹಾಕಿದ್ದರು.ಕೆಪಿಸಿಸಿ ಕಚೇರಿಗೆ ‘ಕೈ’ ಕಾರ್ಯಕರ್ತರ ಮುತ್ತಿಗೆ jk02_new jk02 new

Key words:  ministerial position, congress activists, protest, KPCC office