ಬೆಂಗಳೂರು,ಆಗಸ್ಟ್,4,2026 (www.justkannada.in): ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಸವರಾಜ ಹೊರಟ್ಟಿ ಅವರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ ಮಾಡಿ ಸೂಚಿಸಿದ್ದಾರೆ ಎನ್ನಲಾಗಿದೆ.
ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಪಕ್ಷದಿಂದ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕರೆ ಮಾಡಿ ಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದು ಈ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಬೇಸರ ಹೊರ ಹಾಕಿದ್ದಾರೆ.
ಈ ಕುರಿತು ಮಾತನಾಡಿರುವ ಬಸವರಾಜ ಹೊರಟ್ಟಿ, ಮಧ್ಯಾಹ್ನ ಸಿಎಂ ಕರೆ ಮಾಡಿ ರಾಜೀನಾಮೆ ನೀಡುವಂತೆ ಹೇಳಿದ್ದಾರೆ. ಪಕ್ಷದಿಂದ ಆಯ್ಕೆಯಾಗಿದೆ ತಾವು ರಾಜೀನಾಮೆ ನೀಡಿ ಅಂದರು. ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಿ ಎಂದು ತಿಳಿಸಿದರು.
ಇದು ಕಲುಷಿತ ರಾಜಕಾರಣ. ನನ್ನ ಮನಸಸಿಗೆ ತುಂಬಾ ನೋವಾಗಿದೆ. ಪಕ್ಷದ ಲೆಟರ್ ಹೆಡ್ ನಲ್ಲಿ ಪರಿಷತ್ ಸಭಾಪತಿ ಆಯ್ಕೆ ಆಗಿರಲಿಲ್ಲ. ಇತಿಹಾಸದಲ್ಲೇ ಈ ರೀತಿ ಆಗಿರಲಿಲ್ಲ. ವಿಧಾನಸಭೆ ಸ್ಪೀಕರ್ ಪರಿಷತ್ ಸಭಾಪತಿ ಸ್ಥಾನ ಸಾಂವಿಧಾನಿಕ ಹುದ್ದೆ. ನನಗೆ ನೋಟಿಸ್ ಕೊಡಲಿ. ಉತ್ತರ ಕೊಡುತ್ತೇನೆ ಎಂದರು.
ರಾಜಕಾರಣದಲ್ಲಿ ಒಂದೇ ಒಂದು ಕಪ್ಪುಚುಕ್ಕಿನೂ ಇಲ್ಲ ಯಾವ ಕಾರಣಕ್ಕೆ ರಾಜೀನಾಮೆ ಕೇಳಿದರೂ ಅನ್ನೋದು ಮುಖ್ಯವಾಗುತ್ತದೆ ಎಂದು ಹೊರಟ್ಟಿ ತಿಳಿಸಿದರು.
Key words: CM DK Shivakumar, Basavaraj Horatti, expresses, frustration, resigns







