Wednesday, August 5, 2026

BDA Apartments

Home Front Page ಸಚಿವ ಸ್ಥಾನ ಸಿಗದಿದ್ದಕ್ಕೆ ರಾಜೀನಾಮೆ:  ವಾಪಸ್ ಪಡೆದ ‘ಕೈ’ ಶಾಸಕ

ಸಚಿವ ಸ್ಥಾನ ಸಿಗದಿದ್ದಕ್ಕೆ ರಾಜೀನಾಮೆ:  ವಾಪಸ್ ಪಡೆದ ‘ಕೈ’ ಶಾಸಕ

ಬೆಂಗಳೂರು,ಆಗಸ್ಟ್,5,2026 (www.justkannada.in): ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ  ತಮಗೆ ಮಂತ್ರಿಗಿರಿ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಇದೀಗ ರಾಜೀನಾಮೆ ವಾಪಸ್ ಪಡೆದಿದ್ದಾರೆ.

ಸಿಎಂ ಡಿಕೆ ಶಿವಕುಮಾರ್ ಮತ್ತು ಹೈಕಮಾಂಡ್ ಮನವೊಲಿಕೆ ಬಳಿಕ ಶಾಸಕ ಯಶವಂತರಾಯಗೌಡ ಪಾಟೀಲ ರಾಜೀನಾಮೆ ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಸಚಿವ ಸಂಪುಟ ವಿಸ್ತರಣೆ ಆಗಿದ್ದು ಸಚಿವ ಸ್ಥಾನ ಕೈತಪ್ಪಿದ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದರು. ನೂತನ ಸಚಿವರ ಪಟ್ಟಿ ಸೋಮವಾರ ಬಿಡುಗಡೆಯಾಗುತ್ತಿದ್ದಂತೆ, ಸಚಿವ ಸ್ಥಾನದ ಆಕಾಂಕ್ಷಿಗಳ ಅಸಮಾಧಾನ ಭುಗಿಲೆದ್ದಿತ್ತು.

ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಸಿಡಿಮಿಡಿಗೊಂಡ ಯಶವಂತರಾಯಗೌಡ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.ಇದೀಗ ನಿರ್ಧಾರದಿಂದ ಹಿಂದೆ ಸರಿದಿದ್ದು, ಶಾಸಕ ಸ್ಥಾನಕ್ಕೆ ಕಾರಣಾಂತರಗಳಿಂದ ರಾಜೀನಾಮೆ ನೀಡಿದ್ದೆ. ರಾಜೀನಾಮೆ ಪತ್ರವನ್ನು ಹಿಂಪಡೆಯುತ್ತೇನೆ ಎಂದು ವಿಧಾನಸಭೆ ಕಾರ್ಯದರ್ಶಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.

Key words: ministerial position, Resignation, Cogress MLA, withdrawn