Thursday, August 6, 2026

BDA Apartments

Home Cinema ರೇಣುಕಾಸ್ವಾಮಿ ಕೊಲೆ ಕೇಸ್ : ಮಾಫಿ ಸಾಕ್ಷಿ ಅರ್ಜಿ ವಿಚಾರಣೆ: ಆ.10ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ರೇಣುಕಾಸ್ವಾಮಿ ಕೊಲೆ ಕೇಸ್ : ಮಾಫಿ ಸಾಕ್ಷಿ ಅರ್ಜಿ ವಿಚಾರಣೆ: ಆ.10ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು,ಆಗಸ್ಟ್,6,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಫಿ ಸಾಕ್ಷಿಯಾಗಿ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯ ಆಗಸ್ಟ್ 10ಕ್ಕೆ ಆದೇಶ ಕಾಯ್ದಿರಿಸಿದೆ.

ಪ್ರಕರಣ ಸಂಬಂಧ ಎ14 ಪ್ರದೋಷ್ ಮಾಫಿ ಸಾಕ್ಷಿ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ  59ನೇ ಸೆಷನ್ಸ್ ನ್ಯಾಯಾಲಯದ ಜಡ್ಜ್ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ವಾದ-ಪ್ರತಿವಾದ ಆಲಿಸಿ ವಿಚಾರಣೆಯನ್ನುಆಗಸ್ಟ್ 10ಕ್ಕೆ ಮುಂದೂಡಿದ್ದಾರೆ.

ಎ 14 ಪ್ರದೋಷ್ ಅರ್ಜಿಗೆ ಆರೋಪಿ ನಟ ದರ್ಶನ್ ಪರ ವಕೀಲರ ಆಕ್ಷೇಪ ಹಿನ್ನೆಲೆಯಲ್ಲಿ ಸಹ ಆರೋಪಿಗಳಿಗೆ ಆಕ್ಷೇಪಣೆಯ  ಅವಕಾಶ ನೀಡಬೇಕೇ ಬೇಡವೇ ಎಂಬ ಬಗ್ಗೆ  ಆಗಸ್ಟ್ 10ಕ್ಕೆ ನ್ಯಾಯಾಲಯ ಆದೇಶ ಕಾಯ್ದಿರಿಸಿದೆ.

Key words: Renukaswamy, murder case, Hearing,  Court, reserves, order