ಮೈಸೂರು, ಆ. 7: ನಗರದ ಕುವೆಂಪುನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜ್ಞಾನಗಂಗಾ ಶಾಲೆ ಸಮೀಪ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಗರ ಸಾರಿಗೆ ಬಸ್‌ಗೆ ದ್ವಿಚಕ್ರ ವಾಹನ ಸಿಲುಕಿದ ಪರಿಣಾಮ, ವಿದ್ಯಾರ್ಥಿನಿಯನ್ನು ವಾಹನ ಸಮೇತ ಬಸ್ ಕೆಲ ದೂರದವರೆಗೆ ಎಳೆದೊಯ್ದಿದೆ. ಅಪಘಾತದ ದೃಶ್ಯ ಕಂಡ ಸ್ಥಳೀಯರು ಆತಂಕಕ್ಕೊಳಗಾಗಿದ್ದು, ತಕ್ಷಣವೇ ಬಸ್‌ನ್ನು ನಿಲ್ಲಿಸಿ ವಿದ್ಯಾರ್ಥಿನಿಯನ್ನು ರಕ್ಷಿಸುವ ಕಾರ್ಯಕ್ಕೆ ಮುಂದಾದರು.

ಗಾಯಗೊಂಡ ವಿದ್ಯಾರ್ಥಿನಿಯನ್ನು ಸಾರ್ವಜನಿಕರು ಕೂಡಲೇ ಸಮೀಪದ ಭಾನವಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿದ್ಯಾರ್ಥಿನಿಗೆ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಅವರ ಆರೋಗ್ಯದ ಕುರಿತು ವೈದ್ಯರು ನಿಗಾ ವಹಿಸಿದ್ದಾರೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕುವೆಂಪುನಗರ ಪೊಲೀಸರು ಪರಿಶೀಲನೆ ನಡೆಸಿ, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.
ವಿದ್ಯಾರ್ಥಿನಿಯ ಗುರುತು ಹಾಗೂ ಅಪಘಾತದ ಸಂಪೂರ್ಣ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Key words: Mysuru, College Student, Injured,After City Bus Drags Scooter, Jnanaganga School

SUMMARY:
Mysuru: College Student Injured After City Bus Drags Scooter Near Jnanaganga School
Mysuru, Aug. 7: A college student was injured in a road accident near Jnanaganga School in Kuvempunagar, Mysuru, on Friday.

The student, who was riding a scooter, reportedly got trapped under a city bus and was dragged for a short distance along with the two-wheeler.
Local residents rushed to the spot, rescued the injured student, and shifted her to Bhanavi Hospital for treatment. Kuvempunagar police visited the scene and have launched an investigation into the incident.






