ಬೆಂಗಳೂರು, ಆಗಸ್ಟ್,7,2026 (www.justkannada.in): . ಸಿಎಂ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರ ಸುದೀರ್ಘ ಮನವೊಲಿಕೆ ಬಳಿಕ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸ್ವಇಚ್ಛೆಯಿಂದ ರಾಜೀನಾಮೆ ಎಂದು ಬಸವರಾಜ ಹೊರಟ್ಟಿ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಹೊರಟ್ಟಿ ಅವರನ್ನು ಹಂಗಾಮಿ ಸಭಾಪತಿಯಾಗಿ ಸರ್ಕಾರ ಮುಂದುವರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಕ್ಷಣಮಾತ್ರದಲ್ಲಿ ಹೊರಟ್ಟಿ ಅವರ ರಾಜೀನಾಮೆ ಅಂಗೀಕಾರವಾಗಿದೆ. 
ಇಂದು ಬೆಳಿಗ್ಗೆ ಸಿಎಂ ಡಿಕೆ ಶಿವಕುಮಾರ್ ಅವರನ್ನ ಅವರ ನಿವಾಸದಲ್ಲಿ ಭೇಟಿಯಾಗಿ ಬಳಿಕ ಅಸಮಾಧಾನದಿಂದಲೇ ಹೊರಬಂದಿದ್ದ ಬಸವರಾಜ ಹೊರಟ್ಟಿ ಅವರು ಇದೀಗ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆಗಸ್ಟ್ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ನಿನ್ನೆಯೇ ಹೊರಟ್ಟಿ ಅವರು ಘೋಷಿಸಿದ್ದರು. ಈ ನಡುವೆ ಇಂದು ಅವರು ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದು ಭಾರಿ ಕುತೂಹಲಕ್ಕೆ ಕಾರಣವಾಗಿತ್ತು.
Key words: Basavaraj Horatti, resigns, Legislative Council, Speaker







